ಕೊರೋನಾ ವೈರಸ್ ಲಾಕ್ ಡೌನ್ ಎಲ್ಲ ಧರ್ಮಗಳಿಗೂ ಅನ್ವಯ, ಕಾನೂನಿಗೆ ಮೊದಲು ಗೌರವ ಕೊಡಿ: ಹುಬ್ಬಳ್ಳಿ ಪೊಲೀಸ್ ಆಯುಕ್ತ ಆರ್ ದಿಲೀಪ್ ಮನವಿ

ದೇಶದಲ್ಲಿ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನ ಜಮಾಣೆಗೊಳ್ಳದಂತೆ ಸೂಚಿಸಲಾಗಿದೆ. ಲಾಕ್ ಡೌನ್ ಎಲ್ಲ ಧರ್ಮಗಳಿಗೂ ಅನ್ವಯಿಸುತ್ತದೆ. ದಯಮಾಡಿ ಕಾನೂನಿಗೆ ಗೌರವ ಕೊಡಿ ಎಂದು ಹುಬ್ಬಳ್ಳಿ ಮತ್ತು ಧಾರವಾಡದ ಪೊಲೀಸ್ ಆಯುಕ್ತ ಆರ್ ದಿಲೀಪ್  ಮನವಿ ಮಾಡಿದ್ದಾರೆ.
ಹುಬ್ಬಳ್ಳಿ ಮತ್ತು ಧಾರವಾಡದ ಪೊಲೀಸ್ ಆಯುಕ್ತ ಆರ್ ದಿಲೀಪ್
ಹುಬ್ಬಳ್ಳಿ ಮತ್ತು ಧಾರವಾಡದ ಪೊಲೀಸ್ ಆಯುಕ್ತ ಆರ್ ದಿಲೀಪ್

ಹುಬ್ಬಳ್ಳಿ: ದೇಶದಲ್ಲಿ ಏಪ್ರಿಲ್ 14ರ ವರೆಗೆ ಲಾಕ್ ಡೌನ್ ಘೋಷಿಸಲಾಗಿದ್ದು, ಜನ ಜಮಾಣೆಗೊಳ್ಳದಂತೆ ಸೂಚಿಸಲಾಗಿದೆ. ಲಾಕ್ ಡೌನ್ ಎಲ್ಲ ಧರ್ಮಗಳಿಗೂ ಅನ್ವಯಿಸುತ್ತದೆ. ದಯಮಾಡಿ ಕಾನೂನಿಗೆ ಗೌರವ ಕೊಡಿ ಎಂದು ಹುಬ್ಬಳ್ಳಿ ಮತ್ತು ಧಾರವಾಡದ ಪೊಲೀಸ್ ಆಯುಕ್ತ ಆರ್ ದಿಲೀಪ್  ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅಡ್ಡಿಪಡಿಸಿದ್ದ ಪೊಲೀಸರ ಮೇಲೆ ಕಲ್ಲು ತೂರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಆಯುಕ್ತ ಆರ್ ದಿಲೀಪ್ ಅವರು, ಕೊರೋನಾ ವೈರಸ್ ಸೋಂಕು ಭೀತಿ ಹಿನ್ನಲೆಯಲ್ಲಿ ಲಾಕ್  ಡೌನ್ ಹೇರಲಾಗಿದೆ. ಸೋಂಕು ಯಾರಿಗೂ ತಾಗದೇ ಎಲ್ಲರೂ ಸುರಕ್ಷಿತವಾಗಿರಲಿ ಎಂದು ಲಾಕ್ ಡೌನ್ ಮಾಡಲಾಗಿದೆ. ಆದರೂ ಕೆಲ ಸಮುದಾಯದ ಜನ ಸಾಮೂಹಿಕ ಪ್ರಾರ್ಥನೆಗೆ ಅಡ್ಡಿ ಪಡಿಸಬೇಡಿ ಎಂದು ಹೇಳಿದ್ದಾರೆ. ಆದರೆ ಸುರಕ್ಷಿತೆಯ ದೃಷ್ಟಿಯಿಂದ ಸಾಮೂಹಿಕ ಪ್ರಾರ್ಥನೆ ಬೇಡ.  ನಿಮ್ಮ ಮನೆಗಳಲ್ಲೇ ಪ್ರಾರ್ಥನೆ ಮಾಡಿಕೊಳ್ಳಿ ಎಂದು ತಿಳಿಹೇಳಲಾಗಿದೆ. ಆದರೂ ಕೆಲವರು ಮಸೀದಿಗೆ ಬಂದು ಪ್ರಾರ್ಥನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಅಂತೆಯೇ ಸಾಮೂಹಿಕ ಪ್ರಾರ್ಥನೆ ಬೇಡ ಎಂದು ಹೇಳಲು ಹೋಗಿದ್ದ ಪೊಲೀಸರ ವಿರುದ್ಧ ಕೆಲವರು ಕಲ್ಲು ತೂರಾಟ ಮಾಡಿ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ಹಲವು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಟೌನ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಪರಿಸ್ಥಿತಿ  ತಿಳಿಗೊಳಿಸಿದ್ದಾರೆ. ಪ್ರಸ್ತುತ ಕಲ್ಲು ತೂರಾಟ ನಡೆದ ಪ್ರದೇಶ ಶಾಂತಿಯುತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ವಶಕ್ಕೆ ಪಡೆದಿಲ್ಲ. ಪ್ರಕರಣ ಸಂಬಂಧ ತಿನಿಖೆ ನಡೆಸಲಾಗುತ್ತಿದೆ ಎಂದು ಆರ್ ದಿಲೀಪ್ ಹೇಳಿದರು. 

ಅಲ್ಲದೆ ಲಾಕ್ ಡೌನ್ ಎಲ್ಲ ಧರ್ಮಗಳಿಗೂ ಅನ್ವಯಿಸುತ್ತದೆ. ಇದರಲ್ಲಿ ಯಾವುದೇ ರೀತಿಯ ತಾರಮತ್ಯವಿಲ್ಲ. ಎಲ್ಲರೂ ಲಾಕ್ ಡೌನ್ ನಿಯಮವನ್ನು ಗೌರವಿಸಿ ನಿಯಮ ಪಾಲನೆ ಮಾಡಿ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com