ಕೊಪ್ಪಳ: ಹಾಲು ತರಲು ಬಂದವನಿಗೆ ಲಾಠಿ ಏಟು, ರೈತನ ಸ್ಥಿತಿ ಚಿಂತಾಜನಕ

ದೇಶಾದ್ಯಂತ ತೀವ್ರ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದ್ದು, ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಸುತ್ತಾಡಬೇಡಿ ಎಂದು ಕೊಪ್ಪಳ ಪೊಲೀಸರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.
ದೇವಪ್ಪ
ದೇವಪ್ಪ

ಕೊಪ್ಪಳ: ದೇಶಾದ್ಯಂತ ತೀವ್ರ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ನಿಯಂತ್ರಣಕ್ಕಾಗಿ 21 ದಿನಗಳ ಲಾಕ್ ಡೌನ್ ಘೋಷಿಸಲಾಗಿದ್ದು, ಅನಗತ್ಯವಾಗಿ ಯಾರೂ ಮನೆಯಿಂದ ಹೊರಗೆ ಸುತ್ತಾಡಬೇಡಿ ಎಂದು ಕೊಪ್ಪಳ ಪೊಲೀಸರು ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಆದರೆ ಅಗತ್ಯ ವಸ್ತುಗಳು ವಸ್ತುಗಳನ್ನು ಖರೀದಿಸಲು ಯಾವದೇ ಸಮಸ್ಯೆ ಇಲ್ಲ ಎಂದು ಸ್ವತಃ ಮುಖ್ಯಮಂತ್ರಿಗಳೇ ಹೇಳಿದರೂ ಹಾಲು ತರಲು ಬಂದ ರೈತನ ಮೇಲೆ ಲಾಠಿ ಬೀಸಿದ್ದಾರೆ.

ಕೊಪ್ಪಳ ಜಿಲ್ಲೆ ಅಳವಂಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪೊಲೀಸರು ಎಸೆದ ಲಾಠಿ ರೈತನ ತಲೆಗೆ ತಗುಲಿ ಗಂಭೀರ ಗಾಯವಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರೈತ ಈಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ.

ರೈತ ದೇವಪ್ಪ ಮೊದಲಿನಿಂದಲೂ ಫಿಟ್ಸ್ ಕಾಯಿಲೆಯಿಂದ ಬಳಲುತ್ತಿದ್ದು, ಲಾಠಿ ಏಟು ಬಿದ್ದು ರಕ್ತಸ್ರಾವ ಆಗುತ್ತಿದ್ದಂತೆ ಫಿಟ್ಸ್ ಕಾಣಿಸಿಕೊಂಡಿದೆ. 

ಚಿಕಿತ್ಸೆಗೆಂದು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಶಿಫಾರಸು ಮಾಡಲಾಗಿದೆ.

ಸದ್ಯ ದೇವಪ್ಪ ಅವರು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರ ನಡೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com