ಬೆಳಗಾವಿಯಲ್ಲಿ ಮೂವರಿಗೆ ಕೊರೋನಾ ವೈರಸ್ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಶುಕ್ರವಾರ ಬೆಳಗಾವಿಯಲ್ಲಿ ಮತ್ತೆ ಮೂವರಲ್ಲಿ ಕೊವಿಡ್-19 ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಿದ್ದು, ಶುಕ್ರವಾರ ಬೆಳಗಾವಿಯಲ್ಲಿ ಮತ್ತೆ ಮೂವರಲ್ಲಿ ಕೊವಿಡ್-19 ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 128ಕ್ಕೆ ಏರಿಕೆಯಾಗಿದೆ.

ಬೆಳಗಾವಿಯಲ್ಲಿ ಮೂವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಹೇಳಿದ್ದಾರೆ. ಮೂಲಕ ಇಂದು ಬೆಳಗ್ಗೆಯಿಂದಲೇ ಬೆಳಗಾವಿಯಲ್ಲಿ ಮೂರು ಕೊರೋನಾ ಕೇಸ್‌ ಪಾಸಿಟಿವ್ ಬಂದಿದೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ದೆಹಲಿಯ ನಿಜಾಮುದ್ದೀನ್ ಮರ್ಕಝ್ ಗೆ ತೆರಳಿದ್ದ ಬೆಳಗಾವಿ ಜಿಲ್ಲೆಯ ಒಟ್ಟು 62 ಮಂದಿಯ ಪೈಕಿ 33 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಪೈಕಿ ಮೂವರ ವರದಿ ಪಾಸಿಟಿವ್ ಬಂದಿದೆ ಎಂದು ಸಚಿವರು ತಿಳಿಸಿದ್ದಾರೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ವೈರಸ್‌ ಸೋಂಕು ಪತ್ತೆಯಾಗಿದ್ದು, ಬೆಳಗಾವಿಯಲ್ಲಿ ಈವರೆಗೆ ಯಾರಲ್ಲೂ ಕೊರೋನಾ ಸೋಂಕು ಧೃಡಪಟ್ಟಿರಲಿಲ್ಲ. ಆದರೆ ಈಗ ಒಂದೇ ಬಾರಿ ಮೂವರಿಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದ್ದು, ಜನ ತೀವ್ರ ಆತಂಕದಲ್ಲಿದ್ದಾರೆ. 

ಇಂದು ಬೆಳಗ್ಗೆಯಷ್ಟೇ ಬಾಗಲಕೋಟೆ ಜಿಲ್ಲೆಯ 75 ವರ್ಷದ ವೃದ್ಧನಲ್ಲಿ ಸೋಂಕು ದೃಢಪಟ್ಟಿತ್ತು. ಇಲ್ಲಿಯವರೆಗೆ ರಾಜ್ಯದಲ್ಲಿ ಮೂವರು ಸೋಂಕಿನಿಂದ ಮೃತಪಟ್ಟಿದ್ದು, 11 ಜನರು ಚೇತರಿಕೆ ಕಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com