ಮೈಸೂರಿನಲ್ಲಿ ಮತ್ತೆ ಎರಡು ಕೊರೋನಾ ಸೋಂಕು ಪ್ರಕರಣ ದಾಖಲು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆ

ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಂದು ಮತ್ತೆ 2 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಇಂದು ಮತ್ತೆ 2 ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದೆ.

ಕೋವಿಡ್ 19 ರೆಡ್ ಝೋನ್ ಪಟ್ಟಿಗೆ ಸೇರುವ ಆತಂಕದಲ್ಲಿರುವ ಮೈಸೂರಿಗೆ ಗಾಯದ ಮೇಲೆ ಬರೆ ಎಂಬಂತೆ ಇಂದು ಮತ್ತೆ 2 ಹೊಸ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಜಿಲ್ಲೆಯಲ್ಲಿ ದಾಖಲಾದ ಒಟ್ಟು ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ 21ಕ್ಕೆ  ಏರಿಕೆಯಾಗಿದೆ.

ಮೂಲಗಳ ಪ್ರಕಾರ ಇಂದು ಪತ್ತೆಯಾಗಿರುವ ಸೋಂಕಿತ ವ್ಯಕ್ತಿಗಳು ಈ ಹಿಂದೆ ಪತ್ತೆಯಾಗಿದ್ದ ಸೋಂಕಿತ ವ್ಯಕ್ತಿ ಪೇಷೆಂಟ್ ನಂ 88ರ ರೂಮ್ ಮೇಟ್ಸ್ ಎಂದು ತಿಳಿದುಬಂದಿದೆ. ಇವರೂ ಕೂಡ ಮೈಸೂರಿನವರೇ ಆಗಿದ್ದು, ಇಬ್ಬರನ್ನೂ ಆಸ್ಪತ್ರೆಗೆ ದಾಖಲು ಮಾಡಿ ಪ್ರತ್ಯೇಕಿತ ವಾರ್ಡ್ ನಲ್ಲಿಟ್ಟು  ಚಿಕಿತ್ಸೆ ಕೊಡಲಾಗುತ್ತಿದೆ.

ಇನ್ನು ಮೈಸೂರಿನಲ್ಲಿ ಕೊರೋನಾ ವೈರಸ್ ಮತ್ತು ಹಕ್ಕಿ ಜ್ವರ ಭೀತಿ ಹಿನ್ನಲೆಯಲ್ಲಿ ಸ್ಥಗಿತವಾಗಿದ್ದ ಚಿಕನ್ ವ್ಯಾಪರ ಇಂದಿನಿಂದ ಮತ್ತೆ ಆರಂಭವಾಗಿದೆ. ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಯಾವುದೇ ರೀತಿಯ ಹಕ್ಕಿಜ್ವರದ ಪ್ರಕರಣ ಕಾಣಿಸಿಕೊಳ್ಳದ ಹಿನ್ನಲೆಯಲ್ಲಿ ಜಿಲ್ಲೆಯ 65 ವಾರ್ಡ್ ಗಳಲ್ಲಿ  ಚಿಕನ್ ಮಾರಾಟಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಆದರೆ ವಾರದಲ್ಲಿ ಮೂರು ದಿನ ಮಾತ್ರ ಚಿಕನ್ ಮಾರಾಟಕ್ಕೆ ಅವಕಾಶ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com