ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ 151ಕ್ಕೆ ಏರಿಕೆ,12 ಜನ ಡಿಸ್ಚಾರ್ಜ್ - ಹೆಲ್ತ್ ಬುಲೆಟಿನ್

ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published: 05th April 2020 07:18 PM  |   Last Updated: 05th April 2020 07:27 PM   |  A+A-


Casual_photo_positive1

ಸಾಂದರ್ಭಿಕ ಚಿತ್ರ

Posted By : Nagaraja AB
Source : Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ರಾಜ್ಯ ಸರ್ಕಾರ ಇಂದು ಸಂಜೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಒಟ್ಟು 151 ಜನರಿಗೆ ಈ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 12 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸೋಂಕು ಪೀಡಿತ  135 ವ್ಯಕ್ತಿಗಳಲ್ಲಿ 132 ಮಂದಿ ಗೊತ್ತುಪಡಿಸಿದ ಆಸ್ಪತ್ರೆಗಳ ಪ್ರತ್ಯೇಕ ವಾರ್ಡ್ ನಲ್ಲಿ ಚಿಕಿತ್ಸೆ  ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿರವಾಗಿದೆ. ಮೂವರನ್ನು ತುರ್ತು ನಿಗಾ ಘಟಕದಲ್ಲಿ ಇರಿಸಲಾಗಿದೆ. ನಿನ್ನೆ ಸಂಜೆಯಿಂದ  ಇಂದು ಸಂಜೆ 5 ಗಂಟೆಯವರೆಗೆ ರಾಜ್ಯದಲ್ಲಿ ಏಳು ಹೊಸ ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದಾರೆ.

ದುಬೈಗೆ ಪ್ರಯಾಣ ಮಾಡಿ ಮಾರ್ಚ್ 22 ರಂದು ಭಾರತಕ್ಕೆ ಆಗಮಿಸಿರುವ ಬೆಂಗಳೂರಿನ  68 ವರ್ಷದ  ಪುರುಷ ಹಾಗೂ ಮಹಿಳೆಯರೊಬ್ಬರು ಸೋಂಕಿಗೆ ತುತ್ತಾಗಿದ್ದು, ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ  ಆಕಾಶ್ ಆಸ್ಪತ್ರೆಯಲ್ಲಿ ಕ್ವಾರೆಂಟೈನ್ ನಲ್ಲಿ ಇರಿಸಲಾಗಿದೆ. 

ದೆಹಲಿಯಲ್ಲಿ ನಡೆದ  ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಮಾರ್ಚ್ 20 ರಂದು ಹಿಂತಿರುಗಿರುವ ಬೆಳಗಾವಿ ಜಿಲ್ಲೆಯ ರಾಯ್ ಭಾಗ್ ನ 36 ವರ್ಷದ ಮಹಿಳೆಯೊಬ್ಬರಲ್ಲಿ ಸೋಂಕು ಪತ್ತೆಯಾಗಿದ್ದು, ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ  ಪ್ರತ್ಯೇಕವಾಗಿರಿಸಲಾಗಿದೆ. 

ರಾಜ್ಯದಲ್ಲಿ ಒಟ್ಟು ಪತ್ತೆ ಮಾಡಲಾಗಿರುವ 151 ಪ್ರಕರಣಗಳಲ್ಲಿ 8 ಪ್ರಕರಣಗಳು ಕೇರಳದವರಾಗಿದ್ದು, ಅವರು ಕರ್ನಾಟಕದ ವಿಮಾನ ನಿಲ್ದಾಣಗಳಿಗೆ ಆಗಮಿಸಿ, ಇಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ದಿನ ಮಂಗಳೂರಿನಲ್ಲಿ 86 ಜನರನ್ನು ಮಂಗಳೂರು ಕಡಲು ಬಂದರಿನಲ್ಲಿ ತಪಾಸಣೆ ಮಾಡಲಾಗಿದೆ ಎಂದು ತಿಳಿಸಲಾಗಿದೆ.

Stay up to date on all the latest ರಾಜ್ಯ news with The Kannadaprabha App. Download now
Poll
school

ಶಾಲೆಗಳನ್ನು ತೆರೆಯಲು ಸರ್ಕಾರ ಅನುಮತಿಸಿದರೆ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲು ನೀವು ಸಿದ್ಧರಿದ್ದೀರಾ?


Result
ಹೌದು
ಇಲ್ಲ
ಇನ್ನೂ ನಿರ್ಧರಿಸಿಲ್ಲ
facebook twitter whatsapp