ಕೇಂದ್ರ ಸರ್ಕಾರದ ಸರ್ವಪಕ್ಷ ಸಭೆ:ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಾಗತ

ಕೊರೋನಾ ಪರಿಸ್ಥಿತಿ ಎದುರಿಸಲು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.
ಡಿ ಕೆ ಶಿವಕುಮಾರ್
ಡಿ ಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಪರಿಸ್ಥಿತಿ ಎದುರಿಸಲು ಮುಂದಿನ ದಿನಗಳಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳು ಹಾಗೂ ಅದರ ನಿರ್ವಹಣೆಗೆ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿರುವುದನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.

ನಾನು ಬಹು ಹಿಂದೆಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ವಪಕ್ಷ ಸಭೆ ಕರೆಯಬೇಕು. ದೇಶ ಎದುರಿಸುತ್ತಿರುವ ಈ ಸಂಕಷ್ಟ ಪರಿಸ್ಥಿತಿ ಎದುರಿಸಲು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹ ಮಾಡಿದ್ದೆ. ತಡವಾಗಿಯಾದರೂ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡು ಈ ನಿರ್ಧಾರಕ್ಕೆ ಬಂದಿರುವುದು ಸ್ವಾಗತಾರ್ಹ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಒತ್ತಾಯದ ಮೇರೆಗೆ ರಾಜ್ಯ ಸರ್ಕಾರ ಮಾರ್ಚ್ 29 ರಂದು ಸರ್ವಪಕ್ಷಗಳ ಸಭೆ ಕರೆದಿದ್ದನ್ನು ಇಲ್ಲಿ ಸ್ಮರಿಸಬಹುದು.

'ವಿಷನ್ ಕರ್ನಾಟಕ' ಸಮಿತಿ ರಚನೆ: ೊರೋನಾ ಪರಿಸ್ಥಿತಿ ನಿಯಂತ್ರಿಸಲು ದೇಶದಲ್ಲಿ ಹೇರಲಾಗಿರುವ ಲಾಕ್ ಡೌನ್ ನಿಂದ ಆಗಿರುವ ಆರ್ಥಿಕ ಸಂಕಷ್ಟ ಎದುರಿಸುವ ಬಗ್ಗೆ ರೂಪುರೇಷೆಗಳನ್ನು ರೂಪಿಸಲು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ 'ವಿಷನ್ ಕರ್ನಾಟಕ' ಸಮಿತಿ ರಚಿಸಿದ್ದಾರೆ.

ಕೆಪಿಸಿಸಿ ವತಿಯಿಂದ ರಚಿಸಲಾಗಿರುವ ಈ ಸಮಿತಿಗೆ ರಾಜ್ಯಸಭಾ ಸದಸ್ಯ ರಾಜೀವ್ ಗೌಡ ಅವರು ಸಂಚಾಲಕರಾಗಿದ್ದಾರೆ.

ಸದ್ಯ ದೇಶದಲ್ಲಿನ ಲಾಕ್ ಡೌನ್ ನಿಂದಾಗಿ ಎಲ್ಲ ಕ್ಷೇತ್ರಗಳಲ್ಲೂ ಭಾರೀ ಪ್ರಮಾಣದಲ್ಲಿ ಆರ್ಥಿಕ ಹೊಡೆತ ಬಿದ್ದಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ಇದು ತಂದೊಡ್ಡಬಹುದಾದ ಪ್ರತಿಕೂಲ ಪರಿಣಾಮಗಳನ್ನು ಬಗೆಹರಿಸುವ ಬಗ್ಗೆ ಸಲಹೆಗಳನ್ನು ನೀಡಲು ಈ ಸಮಿತಿಯನ್ನು ರಚಿಸಲಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com