ಕೋಲಾರ: ಕೊರೋನಾ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆನೋವಿನಿಂದ ಕುಸಿದು ಬಿದ್ದು ಸಾವು

ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕರೊಬ್ಬರು ತೀವ್ರ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಲಾರ: ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕರೊಬ್ಬರು ತೀವ್ರ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಈ ಬಗ್ಗೆ ಮಾಧ್ಯಮವೊಂದು ವರದಿ ಮಾಡಿದ್ದು, ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಚೆಕ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದ್ದು, ಮೃತ ಅಧಿಕಾರಿಯನ್ನು 45 ವರ್ಷದ ಸರವಣ ಎಂದು ಗುರುತಿಸಲಾಗಿದೆ. ಸರವಣ ಅವರು ಮುಳಬಾಗಿಲು ತಾಲೂಕಿನ ಊರುಕುಂಟೆ  ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಿರಿಯ ಆರೋಗ್ಯ ನಿರೀಕ್ಷಕರಾಗಿ ಕೆಲಸ ಮಾಡುತ್ತಿದ್ದರು. 

ಭಾನುವಾರ ರಾತ್ರಿ ಕೂಡ ಕೊರೊನಾ ಸಂಬಂಧ ಕರ್ತವ್ಯದಲ್ಲಿದ್ದರು. ಆದರೆ ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಯಲ್ಲಿ ಪರೀಕ್ಷೆ  ಮಾಡಲಾಗಿದೆ. ಆದರೆ ಅಷ್ಟರಲ್ಲಿಯೇ ಸರವಣ ಅವರು ಮೃತಪಟ್ಟಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com