ಸಾಮೂಹಿಕ ನಮಾಜ್ ಮಾಡಿದ 24 ಮಂದಿ ವಿರುದ್ ಕೇಸ್, ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 22 ಮಂದಿಯ ಬಂಧನ

ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಬೀದರ್‌ನ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಬೀದರ್‌ನ ಕಮಲನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಔರಾದ್ ತಾಲೂಕಿನ ಕಮಲನಗರದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಸಾಮೂಹಿಕ ನಮಾಜ್ ಮಾಡಲಾಗಿತ್ತು. ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಕಮಲನಗರ ಪೊಲೀಸರು ನಮಾಜ್ ಮಾಡುತ್ತಿದ್ದ 24 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಲಾಕ್ ಡೌನ್ ಉಲ್ಲಂಘಿಸಿ ಸಾಮಾಹಿಕವಾಗಿ ನಮಾಜ್ ಮಾಡುವುದು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಧಾರ್ಮಿಕ ಕಾರ್ಯಕ್ರಮ ನಡೆಸುವವರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಗೆ ಮನೆಯಲ್ಲಿ ಲೈಟ್ ಆಫ್ ಮಾಡಿ ದೀಪ ಹಚ್ಚುವಂತೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಲೈಟ್ ಆಫ್ ಮಾಡದಿರುವುದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ 22 ಮಂದಿಯನ್ನು ಬೆಳಗಾವಿ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಹೊಸೂರು ಗ್ರಾಮದಲ್ಲಿ ನಿನ್ನೆ ರಾತ್ರಿ 9 ಗಂಟೆಗೆ ಮಸೀದಿಯಲ್ಲಿ ಲೈಟ್ ಆಫ್ ಮಾಡದ ಹಿನ್ನೆಲೆಯಲ್ಲಿ ಕೆಲ ದುಷ್ಕರ್ಮಿಗಳು ಮಸೀದಿಗೆ ನುಗ್ಗಿ ಗಲಾಟೆ ನಡೆಸಿದ್ದು, ಪೊಲೀಸರು 9 ಮಂದಿಯನ್ನು ಬಂಧಿಸಿದ್ದಾರೆ.

ಇನ್ನು ನಿಪ್ಪಾಣಿ ತಾಲೂಕಿನ ಮಸೀದಿಯಲ್ಲೂ ಗಲಾಟೆ ನಡೆಸಿದ್ದ 13 ಮಂದಿಯನ್ನು ಪೊಲೀಸರು ಬಂಧಿಸಿದ್ದು, ಯಮನಕರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com