ಬೇಕರಿ ತೆರೆಯಲು ಅವಕಾಶ: ಪಾರ್ಸೆಲ್ ಕೊಡಲು ಮಾತ್ರ ಅನುಮತಿ

ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊರೋನಾ ವೈರಸ್ ಭೀತಿಯಿಂದಾಗಿ ಇಡೀ ದೇಶವೇ ಲಾಕ್ ಡೌನ್ ಆಗಿದೆ. ರಾಜ್ಯದಲ್ಲಿಯೂ ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದೆ. ಇದರಿಂದ ಮಕ್ಕಳು, ವೃದ್ಧರು, ರೋಗಿಗಳು ಹಾಗೂ ಜನಸಾಮಾನ್ಯರಿಗೆ ತೊಂದರೆ ಆಗಿದೆ. ಹೀಗಾಗಿ ರಾಜ್ಯದಲ್ಲಿ ಬೇಕರಿ ಉತ್ಪನ್ನಗಳನ್ನು ತಯಾರಿಸಲು ಹಾಗೂ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ. 

ಬೇಕರಿ, ಬಿಸ್ಕೆಟ್ಟು, ಕ್ಯಾಂಡಿಮೆಂಟ್ಸ್‌, ಮಿಠಾಯಿ ಹಾಗೂ ಸಿಹಿತಿಂಡಿಗಳನ್ನು ತಯಾರಿಸಿ ಮಾರಾಟ ಮಾಡಲು ಅನುಮತಿ ಕೊಡಲಾಗಿದೆ ಎಂದು ಅಗತ್ಯ ವಸ್ತುಗಳ ಮತ್ತು ಪೂರೈಕೆ ಸರಪಳಿ ನಿರ್ವಹಣೆಯ ರಾಜ್ಯ ನೋಡೆಲ್ ಅಧಿಕಾರಿ ರಾಜೇಂದರ್ ಕುಮಾರ್ ಕಟಾರಿಯಾ ಅವರು ಕೇಂದ್ರ ಸರ್ಕಾರದ ಸೂಚನೆಯಂತೆ ಆದೇಶ ಹೊರಡಿಸಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಕಳಿಸಿದ್ದಾರೆ. ಅಗತ್ಯ ವಸ್ತುಗಳ ನಿರ್ವಹಣೆಯಡಿ ಬೇಕರಿ ಹಾಗೂ ಚಿಲ್ಲರೆ ಅಂಗಡಿಗಳು ತೆರೆಯಲಿವೆ.

ಆದರೆ ಸಂಪೂರ್ಣ ಮುಂಜಾಗ್ರತೆಯೊಂದಿಗೆ ಬೇಕರಿ ಉತ್ಪನ್ನಗಳನ್ನು ತಯಾರಿಸಬೇಕೆಂದು ಆದೇಶ ಮಾಡಲಾಗಿದೆ. ಸಿಹಿ ತಿಂಡಿ, ಬಿಸ್ಕೆಟ್ಟು ತಯಾರಿಸಲು ಅತ್ಯಂಕ ಕಡಿಮೆ ಸಿಬ್ಬಂದಿ ಬಳಸಿಕೊಳ್ಳಬೇಕು, ಆರೋಗ್ಯವಂತರು ಉತ್ಪನ್ನಗಳ ತಯಾರಿಕೆ ಮಾಡಬೇಕು, ಅತ್ಯಂತ ಹೆಚ್ಚಿನ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ಉತ್ಪಾದನೆ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಜೊತೆಗೆ ಯಾವುದೇ ಕಾರಣಕ್ಕೂ ಬೇಕರಿ ಎದುರು ಅಥವಾ ಬೇಕರಿಯಲ್ಲಿ ತಿನ್ನಲು ಅಥವಾ ಸರಬರಾಜು ಮಾಡಲು ಅವಕಾಶವಿಲ್ಲ. ಬೇಕರಿಯಿಂದ ಪಾರ್ಸೆಲ್ ಕೊಡಲು ಮಾತ್ರ ಅನುಮತಿಯಿದೆ ಎಂದು ತಿಳಿಸಲಾಗಿದೆ.

ಇದೀಗ ಕೇಂದ್ರ ಸರ್ಕಾರ ಕೊಟ್ಟಿರುವ ರಿಯಾಯತಿಯಿಂದ ಏಪ್ರಿಲ್ 14ಕ್ಕೆ ಲಾಕ್‌ಡೌನ್ ಕೊನೆಯಾಗುತ್ತದೆಯಾ ಎಂಬ ಭಾವನೆಗಳು ಬಂದಿವೆ. ಬೇಕರಿ ತೆರೆಯಲು ಅವಕಾಶ ಕೊಟ್ಟಿರುವಂತೆ ಇನ್ನೂ ಹಲವು ಸೇವೆಗಳಿಗೆ ಲಾಕ್‌ಡೌನ್ ಅವಧಿಯ ಬಳಿಕ ಕೊಡುವ ಸಾಧ್ಯತೆಗಳಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com