ಕೊವಿಡ್-19: ಮೈಸೂರಿನ ಮೊದಲ ಸೋಂಕಿತ ವ್ಯಕ್ತಿ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮೈಸೂರಿನಲ್ಲಿ ತೀವ್ರ ತಲ್ಲಣ ಸೃಷ್ಟಿಸಿರುವ ಮಹಾಮಾರಿ ಕೊರೋನಾ ಸೋಂಕಿತ ಮೊದಲ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಮೈಸೂರು ಲಾಕ್ ಡೌನ್
ಮೈಸೂರು ಲಾಕ್ ಡೌನ್

ಮೈಸೂರು: ಮೈಸೂರಿನಲ್ಲಿ ತೀವ್ರ ತಲ್ಲಣ ಸೃಷ್ಟಿಸಿರುವ ಮಹಾಮಾರಿ ಕೊರೋನಾ ಸೋಂಕಿತ ಮೊದಲ ವ್ಯಕ್ತಿ ಸಂಪೂರ್ಣ ಗುಣಮುಖರಾಗಿದ್ದು, ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ಸಾಂಸ್ಕೃತಿಕ ನಗರಿ ಜನತೆಯಲ್ಲಿ ಭರವಸೆ ಮೂಡುವಂತೆ ಮಾಡಿದೆ.

ಅಧಿಕಾರಿಗಲ ಪ್ರಕಾರ, ದುಬೈನಿಂದ ಆಗಮಿಸಿದ್ದ ಮೈಸೂರಿನ ಮೊದಲ ಸೋಂಕಿತ 35 ವರ್ಷದ ವ್ಯಕ್ತಿ ಏಪ್ರಿಲ್ 7ರಂದು ಮಧ್ಯಾಹ್ನ 2.30ಕ್ಕೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮೈಸೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಈ ವ್ಯಕ್ತಿ ಕಳೆದ 18 ದಿನಗಳ ಕಾಲ ಚಿಕಿತ್ಸೆ ಪಡೆದುಕೊಂಡಿದ್ದರು.  ಎರಡನೇ ಬಾರಿಯ ಸ್ಯಾಂಪಲ್ ಟೆಸ್ಟ್‌ನಲ್ಲಿ ನೆಗೆಟಿವ್ ವರದಿ ಬಂದಿದೆ. ಕೊರೋನಾ ಗುಣಲಕ್ಷಣಗಳಿಂದಲೂ ಮುಕ್ತನಾದ ಈ ವ್ಯಕ್ತಿಯನ್ನು ಆಸ್ಪತ್ರೆಯಿಂದ ಡಿಸ್ವಾರ್ಜ್ ಮಾಡಿ ಮನೆಗೆ ಕಳುಹಿಸಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಮಾಹಿತಿ ನೀಡಿದ್ದಾರೆ.

ಮೈಸೂರು ಜಿಲ್ಲೆಯಲ್ಲಿ ಒಟ್ಟು 3057 ಕೊರೋನಾ ನಿಗಾ ಪ್ರಕರಣಗಳಿದ್ದು, 287  ಸ್ಯಾಂಪಲ್‌ ಟೆಸ್ಟ್ ಮಾಡಲಾಗಿದೆ. ಇದರಲ್ಲಿ 174 ನೆಗೆಟಿವ್ ಬಂದಿವೆ.  35 ಪ್ರಕರಣಗಳು ಪಾಸಿಟಿವ್ ಬಂದಿವೆ. ಇನ್ನೂ 70 ಪ್ರಕರಣಗಳ ವರದಿ ಬರಲು ಬಾಕಿಯಿದೆ. ಪ್ರಸ್ತುತ ಆಸ್ಪತ್ರೆಯಲ್ಲಿ 34 ಮಂದಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದೇಶದಿಂದ ಬಂದು ಮನೆಯಲ್ಲೇ 1533 ಮಂದಿಯನ್ನು ನಿಗಾದಲ್ಲಿ ಇರಿಸಲಾಗಿದೆ. 1490 ಮಂದಿ 14 ದಿನಗಳ ಕಾಲ ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com