ರಾಯಬಾಗ: ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ಮಾಡಿದ್ದವರ ಬಂಧನ

ಕುಡಚಿ ಪೊಲೀಸ್ ಠಾಣೆ
ಕುಡಚಿ ಪೊಲೀಸ್ ಠಾಣೆ

ರಾಯಬಾಗ; ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಸರ್ವೆ ಕಾರ್ಯ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಕುಡಚಿ ಪೊಲೀಸರು ಬಂಧಿಸಿದ್ದಾರೆ.

ಕುಡಚಿ ಪಟ್ಟಣದಲ್ಲಿ ನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಹಿನ್ನೆಲೆ ಮೂರು ಜನ ಆಶಾ‌ ಕಾರ್ಯಕರ್ತೆಯರು ಮಂಗಳವಾರ ಮನೆಮನೆ ಸರ್ವೆ ಕಾರ್ಯ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಕಾರ್ಯಕರ್ತರ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿ ಅವರ ಕೈಯಲ್ಲಿದ್ದ ದಾಖಲೆಗಳನ್ನು ಹರಿದು ಹಾಕಿದ್ದರ ಹಿನ್ನೆಲೆಯಲ್ಲಿ ಈ ಕುರಿತು ಆಶಾ
ಕಾರ್ಯಕರ್ತೆಯರು ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಐಪಿಸಿ ೧೪೩, ೧೪೭, ೩೨೩, ೩೫೩, ೩೫೪(ಬಿ), ೧೮೮, ೧೦೯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಪೊಲೀಸರು ತನಿಖೆ ಕೈಗೊಂಡು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕುಡಚಿ ಪಟ್ಟಣದ ಅಬ್ದುಲ್ಖಾದರ್ ರೋಹಿಲೆ(೪೧), ಅತ್ತಾವುಲ್ಲ್ ಕಮಲಖಾನ್ (೨೬), ಆಸೀಫ್ ಪಾಶ್ವಾಪೂರೆ(೩೨), ಶಿರಾಜುದ್ದೀನ ಬಸ್ತಿ(೫೦), ಮುಜಮ್ಮಿಲ್ ಬಸ್ತಿ(೨೫) ಪೊಲೀಸರ
ವಶದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com