ಲಾಕ್ ಡೌನ್ ಸಮಯದಲ್ಲಿ ಮಾರ್ಗ ಮಧ್ಯೆ ಅಸುನೀಗಿದ ಗಂಗಮ್ಮ ಕುಟುಂಬಕ್ಕೆ ಸೂಕ್ತ ನೆರವು: ಸಿಎಂ ಯಡಿಯೂರಪ್ಪ

ಲಾಕ್ ಡೌನ್ ಸಂದರ್ಭದಲ್ಲಿ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸೌಖ್ಯಕ್ಕೀಡಾಗಿ ಸರಿಯಾಗಿ ಆಹಾರ ಸಿಗದೆ ಅಸುನೀಗಿದ ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಮೃತ ಗಂಗಮ್ಮ
ಮೃತ ಗಂಗಮ್ಮ

ಬೆಂಗಳೂರು:ಲಾಕ್ ಡೌನ್ ಸಂದರ್ಭದಲ್ಲಿ ತನ್ನೂರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಮಾರ್ಗಮಧ್ಯೆ ಅಸೌಖ್ಯಕ್ಕೀಡಾಗಿ ಸರಿಯಾಗಿ ಆಹಾರ ಸಿಗದೆ ಅಸುನೀಗಿದ ರಾಯಚೂರು ಜಿಲ್ಲೆಯ ಸಿಂಧನೂರಿನ ಮಹಿಳೆ ಕುಟುಂಬಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಈ ಬಗ್ಗೆ ಸಂತಾಪ ಸೂಚಿಸಿರುವ ಅವರು ಮೃತರ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ತಿಳಿಸಿದ್ದಾರೆ.

ಭಾರತ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಯಚೂರಿಗೆ ಹೊರಟಿದ್ದ ಗಂಗಮ್ಮ ಎಂಬ ಮಹಿಳೆ ಅನ್ನ, ನೀರು ಸಿಗದೆ ಜೊತೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದರು. ಮಹಿಳೆಯನ್ನು ಕಳೆದ 5ರಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯ ಹಿನ್ನೆಲೆಯಲ್ಲಿ ದಾಖಲಿಸಲಾಗಿತ್ತು. ಸರಿಯಾಗಿ ಊಟ ಸಿಗದ ಕಾರಣ ರಕ್ತ ಕಡಿಮೆಯಾಗಿದ್ದು, ಕಿಡ್ನಿ ಸಮಸ್ಯೆಯಿಂದ ಬಳಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com