ನಾಳೆ ತುರ್ತು ಸಚಿವ ಸಂಪುಟ ಸಭೆ: ಲಾಕ್‌ಡೌನ್‌ ಮುಂದುವರಿಸುವ ಬಗ್ಗೆ ಚರ್ಚೆ ಸಾಧ್ಯತೆ

ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸಿಎಂ ಬಿಎಸ್ ವೈ (ಸಂಗ್ರಹ ಚಿತ್ರ)
ಸಿಎಂ ಬಿಎಸ್ ವೈ (ಸಂಗ್ರಹ ಚಿತ್ರ)

ಬೆಂಗಳೂರು: ಕೊರೊನಾ ಲಾಕ್‌ಡೌನ್ ಹಿನ್ನೆಲೆಯಲ್ಲಿ ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಳೆ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.

ನಾಳೆ ಬೆ. 11ಕ್ಕೆ ಸಚಿವ ಸಂಪುಟ ಸಭೆ ನಡೆಯಲಿದ್ದು ಏಪ್ರಿಲ್ 14ರ ಬಳಿಕ ರಾಜ್ಯದಲ್ಲಿ ಲಾಕ್‌ ಡೌನ್ ಮುಂದುವರೆಸಬೇಕೇ ಬೇಡವೇ ಎಂಬ ಬಗ್ಗೆ ಹಾಗೂ ರಾಜ್ಯದ ಜಿಲ್ಲೆಗಳಲ್ಲಿ ಕೊರೊನಾ ಲಾಕ್‌ ಡೌನ್ ನಿಂದ ಆದ ಪರಿಣಾಮ, ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯವೈಖರಿ ಬಗ್ಗೆ ಸಭೆಯಲ್ಲಿ  ಯಡಿಯೂರಪ್ಪ ಮಾಹಿತಿ ಪಡೆಯಲಿದ್ದಾರೆ.

ಇನ್ನು ಏಪ್ರಿಲ್ 14 ರಂದು ಲಾಕ್‌ ಡೌನ್‌ ತೆರವು ಮಾಡುವುದಿಲ್ಲ. ತಕ್ಷಣವೇ ಲಾಕ್‌ಡೌನ್ ತೆರವು ಮಾಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಅಲ್ಲದೇ ಇದೇ ಏ.11ರಂದು ಪ್ರಧಾನಿ ಮೋದಿ ದೇಶದ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಕೊರೊನಾ ಲಾಕ್‌ ಡೌನ್ ಸ್ಥಿತಿಗತಿ ಅರಿಯಲು  ವಿಡಿಯೋ ಸಂವಾದ ನಡೆಸಲಿದ್ದಾರೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡ ತೀರ್ಮಾನ ಮತ್ತು ವಿವರವನ್ನು ಯಡಿಯೂರಪ್ಪ ವಿಡಿಯೋ ಸಂವಾದದಲ್ಲಿ ಪ್ರಧಾನಿಗೆ ತಿಳಿಸಲಿದ್ದಾರೆ ಎಂದು ತಿಳಿದುಬಂದಿದೆ.

ವಿರೋಧ ಪಕ್ಷದ ನಾಯಕರೊಂದಿಗೆ ನಡೆಸಿದ ಸಭೆಯಲ್ಲಿ ಮೋದಿ ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ್ದು, ಏಪ್ರಿಲ್ 14ರಂದು ಲಾಕ್‌ ಡೌನ್ ತೆರವು ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ನಲ್ಲಿ ವಿರೋಧ ಪಕ್ಷದ ನಾಯಕರೊಂದಿಗೆ ಸಂವಾದ ನಡೆಸಿದ ಮೋದಿ,  ತಕ್ಷಣವೇ ಲಾಕ್‌ ಡೌನ್ ತೆರವುಗೊಳಿಸುವುದಿಲ್ಲ. ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಮುಂದುವರಿಕೆ ಅಗತ್ಯವಾಗಿದೆ ಎಂದು ಹೇಳಿದ್ದಾರೆ. ಈ ಮೂಲಕ ಏಪ್ರಿಲ್ 14 ರ ನಂತರವೂ ಲಾಕ್ ಡೌನ್ ಮುಂದುರೆಸುವ ಸುಳಿವು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com