ಕಲಬುರಗಿ: ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ; 2 ಖಾಸಗಿ ಆಸ್ಪತ್ರೆಗಳು ಬಂದ್

ಕೊರೋನಾ ಸೋಂಕು ಇರುವ ವ್ಯಕ್ತಿಗಳ ಬಗ್ಗೆ ಖಾಸಗಿ ಆಸ್ಪತ್ರೆ ಸರಿಯಾದ ಸಮಯಕ್ಕೆ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಶರತ್ ಬಿ ತಿಳಿಸಿದ್ದಾರೆ.
ಕಲಬುರಗಿ: ಶಂಕಿತ ಕೊರೊನಾ ರೋಗಿಗಳ ಬಗ್ಗೆ ನಿರ್ಲಕ್ಷ್ಯ; 2 ಖಾಸಗಿ ಆಸ್ಪತ್ರೆಗಳು ಬಂದ್

ಕಲಬುರಗಿ: ಕೊರೊನಾ ವೈರಸ್ ರೋಗ ಲಕ್ಷಣಗಳಿರುವವರ ಬಗ್ಗೆ ಮಾಹಿತಿ ನೀಡದ ಖಾಸಗಿ ಆಸ್ಪತ್ರೆಗಳನ್ನು ಬಂದ್ ಮಾಡಿರುವುದಾಗಿ ಜಿಲ್ಲಾಧಿಕಾರಿ ಶರತ್.ಬಿ ತಿಳಿಸಿದ್ದಾರೆ.

ಶಂಕಿತ ಕೊರೊನಾ ರೋಗಿಗಳನ್ನು ಬಹಳಷ್ಟು ದಿನಗಳ ಕಾಲ ಆಸ್ಪತ್ರೆ ಗಳಲ್ಲಿ ದಾಖಲಿಸಿಕೊಂಡು ರೋಗ ಉಲ್ಬಣಿಸಿದ ಬಳಿಕ ಇಎಸ್ಐ ಮತ್ತು ಜಿಮ್ಸ್ ಆಸ್ಪತ್ರೆಗೆ ಕಳುಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸ್ಟಾರ್ ಆಸ್ಪತ್ರೆ ಸಿಬ್ಬಂದಿಯು ಕೊರೊನಾ ರೋಗ ಲಕ್ಷಣವುಳ್ಳ ರೋಗಿಯನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ. ಆದರೆ, ಈ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ನೀಡಿರುವುದಿಲ್ಲ. ಜೊತೆಗೆ ಆಸ್ಪತ್ರೆಯಲ್ಲಿ ಈ ಬಗ್ಗೆ ಯಾವುದೇ ದಾಖಲೆಗಳನ್ನು ಇಟ್ಟುಕೊಂಡಿಲ್ಲ.ಈ ಹಿನ್ನೆಲೆಯಲ್ಲಿ ಸ್ಟಾರ್‌ ಆಸ್ಪತ್ರೆ ಯನ್ನು ಬಂದ್ ಮಾಡಲಾಗಿದೆ. ಅದೇ ರೀತಿ ಬಹಮನಿ ಆಸ್ಪತ್ರೆಯನ್ನು ಬಂದ್ ಮಾಡಿ, ಸಿಬ್ಬಂದಿಯನ್ನು ಕ್ವಾರೈಂಟೀನ್ ನಲ್ಲಿ ಇಡಲಾಗಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com