ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಮಾಸ್ಕ್ ಇಲ್ಲ, ಗ್ಲೋವ್ಸ್ ಇಲ್ಲ, ಪಿಪಿಇ ಕಿಟ್ ಗಳೂ ಇಲ್ಲ: ಹೈಕೋರ್ಟ್ ಕದ ತಟ್ಟಿದ ವೈದ್ಯರು

ಬೀದರ್ ಮತ್ತು ಕಲಬುರಗಿಯಲ್ಲಿ "ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರಿಗೆ, ಮಾಸ್ಕ್, ಗ್ಲೋವ್ಸ್ ಹಾಗೂ ಸ್ಯಾನಿಟೈಸರ್ ಮತ್ತು ಪಿಪಿಇ ಕಿಟ್ ಗಳನ್ನು ಒದಗಿಸಲು ಕೋರ್ಟ್ ಮದ್ಯ ಪ್ರವೇಶಿಸಬೇಕು ಎಂದು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಬೆಂಗಳೂರು: ಬೀದರ್ ಮತ್ತು ಕಲಬುರಗಿಯಲ್ಲಿ "ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವವರಿಗೆ, ಮಾಸ್ಕ್, ಗ್ಲೋವ್ಸ್ ಹಾಗೂ ಸ್ಯಾನಿಟೈಸರ್ ಮತ್ತು ಪಿಪಿಇ ಕಿಟ್ ಗಳನ್ನು ಒದಗಿಸಲು ಕೋರ್ಟ್ ಮದ್ಯ ಪ್ರವೇಶಿಸಬೇಕು ಎಂದು ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತೆಯರು ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈ ಸಂಬಂದ ವಿವಿಧ ವಿಡಿಯೋ ಕಾನ್ಫರೆನ್ಸ್ ನಡೆಸಿದ ನ್ಯಾಯಮೂರ್ತಿ ಓಕಾ ಅವರನ್ನೊಳಗೊಂಡ ವಿಭಾಗೀಯ  ಮಾಸ್ಕ್, ಪಿಪಿಇ, ಸ್ಯಾನಿಟೈಸರ್ ಹಾಗೂ ವೆಂಟಿಲೇಟರ್‌ ಬೇಡಿಕೆ ಎಷ್ಟಿದೆ. ಅದಕ್ಕೆ ಅನುಗುಣವಾಗಿ ಯಾವ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂಬ ಸಂಪೂರ್ಣ ವಿವರ ಒದಗಿಸಿ" ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

"2.40 ಲಕ್ಷ ಎನ್-95 ಮಾಸ್ಕ್, 6.94 ಲಕ್ಷ ತ್ರಿಬಲ್ ಲೇಯರ್ ಮಾಸ್ಕ್, 53 ಸಾವಿರ ಪಿಪಿಇ ಕಿಟ್‌ಗಳು ಕರ್ನಾಟಕ ಡ್ರಗ್‌ ಲಾಜಿಸ್ಟಿಕ್ ಅಂಡ್ ವೇರ್‌ ಹೌಸಿಂಗ್ ಸೊಸೈಟಿಯಲ್ಲಿ ಸ್ಟಾಕ್ ಇದೆ. 324 ವೆಂಟಿಲೇಟರ್, 18.33 ಲಕ್ಷ ಎನ್-95 ಮಾಸ್ಕ್, 54 ಲಕ್ಷ ತ್ರಿಬಲ್ ಲೇಯರ್ ಮಾಸ್ಕ್, 10 ಲಕ್ಷ ಪಿಪಿಇ ಕಿಟ್ಸ್, 25 ಸಾವಿರ ಹ್ಯಾಂಡ್ ಸ್ಯಾನಿಟೈಸರ್ ಬಾಟಲ್‌ಗಳ ಖರೀದಿಗೆ ಆದೇಶಗಳನ್ನು ಹೊರಡಿಸಲಾಗಿದೆ" ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, "ಕಲಬುರ್ಗಿಯ ಇಎಸ್‌ಐ ಆಸ್ಪತ್ರೆಯ ಡಾ. ಝೀನತ್ ಆಸ್ಪತ್ರೆಯ ಸಿಬ್ಬಂದಿಗೆ ಮಾಸ್ಕ್‌ಗಳನ್ನು ನೀಡಿಲ್ಲ ಎಂದು ಹೈಕೋರ್ಟ್ ಗೆ ಇ-ಮೇಲ್ ಮಾಡಿದ್ದಾರೆ. ಅಲ್ಲದೇ ಮಾಸ್ಕ್, ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್‌ಗಳನ್ನು ಒದಗಿಸಿಲ್ಲ ಎಂದು ಬೀದರ್ ಜಿಲ್ಲೆಯ ಚೆಕ್‌ಪೋಸ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿರುವ  ಆಶಾ ಮತ್ತು ಆರೋಗ್ಯ ಸಹಾಯಕಿಯರೂ ಮೇಲ್ ಮಾಡಿದ್ದಾರೆ. ಆದ್ದರಿಂದ ಈ ಕುರಿತ ಸಂಪೂರ್ಣ ವಿವರ ನೀಡಿ" ಎಂದು ಸೂಚಿಸಿ ಇದೇ 9ಕ್ಕೆ ವಿಚಾರಣೆ ಮುಂದೂಡಿದೆ.

Related Stories

No stories found.

Advertisement

X
Kannada Prabha
www.kannadaprabha.com