ರಾಜ್ಯಾದಂತ  ಸಾಮೂಹಿಕ ರಕ್ತದಾನ ಶಿಬಿರ ನಡೆಸಲು ಕಾಂಗ್ರೆಸ್ ಚಿಂತನೆ: ಡಿಕೆಶಿ

ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದ್ದು, ಹಲವು ಸ್ವಯಂ ಸೇವಾ ಸಂಘಟನೆಗಳು ರಕ್ತದಾನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.
ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್

ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ರಕ್ತ ನಿಧಿಯಲ್ಲಿ ರಕ್ತದ ಕೊರತೆ ಎದುರಾಗಿದ್ದು, ಹಲವು ಸ್ವಯಂ ಸೇವಾ ಸಂಘಟನೆಗಳು ರಕ್ತದಾನ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾದ್ಯಂತ ಸಾಮೂಹಿಕ ರಕ್ತದಾನ ಶಿಬಿರ ಆಯೋಜಿಸಲು ಚಿಂತನೆ ನಡೆಸುತ್ತಿದೆ.

ಬ್ಲಡ್ ಬ್ಯಾಂಕ್ ಗಳ ಸಹಯೋಗದೊಂದಿಗೆ ಕೆಪಿಸಿಸಿ ವತಿಯಿಂದ ರಕ್ತದಾನ ಶಿಬಿರ ಆಯೋಜಿಸಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಅಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟಕರು ರಕ್ತದಾನ ಮಾಡುವ ಮೂಲಕ ಬೇರೆಯವರಿಗೂ ಪ್ರೇರಣೆ ನೀಡಬೇಕು ಎಂದು ಶಿವಕುಮಾರ್ ತಿಳಿಸಿದ್ದಾರೆ. ಆರ್ ಎಸ್ ಎಸ್ ಕೂಡ ಏಪ್ರಿಲ್ 12 ರಂದು ರಾಷ್ಟ್ರೋತ್ಥಾನ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಶಿಬಿರ ಆಯೋಜಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com