ದೇಶಕ್ಕೆ ಅನ್ವಯವಾಗುವಂತೆ 3 ತಿಂಗಳು ಬಾಡಿಗೆ ವಿನಾಯ್ತಿ ನೀಡಿ: ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಒತ್ತಾಯ

ಕೊರೋನಾ ಸೋಂಕಿನಿಂದ ಲಾಕ್ ಡೌನ್ ಆಗಿರುವುದರಿಂದ ತೀವ್ರ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದು ಈ ಸಂದರ್ಭದಲ್ಲಿ ಬಾಡಿಗೆದಾರರನ್ನು ಕಾಪಾಡಲು ಕೇಂದ್ರ ಸರ್ಕಾರ ಬಾಡಿಗೆ ವಿನಾಯ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು:ಕೊರೋನಾ ಸೋಂಕಿನಿಂದ ಲಾಕ್ ಡೌನ್ ಆಗಿರುವುದರಿಂದ ತೀವ್ರ ಆರ್ಥಿಕ ಮುಗ್ಗಟ್ಟು ಉಂಟಾಗಿದ್ದು ಈ ಸಂದರ್ಭದಲ್ಲಿ ಬಾಡಿಗೆದಾರರನ್ನು ಕಾಪಾಡಲು ಕೇಂದ್ರ ಸರ್ಕಾರ ಬಾಡಿಗೆ ವಿನಾಯ್ತಿ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಇಡೀ ದೇಶಕ್ಕೆ ಅನ್ವಯವಾಗುವಂತೆ ಮೂರು ತಿಂಗಳು ಬಾಡಿಗೆ ವಿನಾಯ್ತಿಯನ್ನು ಪ್ರಧಾನಿ ಘೋಷಿಸಬೇಕೆಂದು ಮನವಿ ಮಾಡಿದ್ದಾರೆ. ದೆಹಲಿ ಸರ್ಕಾರ ಮೂರು ತಿಂಗಳ ಬಾಡಿಗೆಯನ್ನು ತಾನೇ ಕೊಡುವ ಮೂಲಕ ಯೋಜನೆ ಘೋಷಿಸಿದೆ. ಇಂತಹ ಯೋಜನೆಯನ್ನು ದೇಶಾದ್ಯಂತ ಜಾರಿಗೆ ತರಬೇಕೆಂದು ಒತ್ತಾಯಿಸಿದ್ದಾರೆ.

ದೆಹಲಿ ಮುಂಬಯಿ ಬೆಂಗಳೂರಿನಂತಹ ನಗರಗಳಲ್ಲಿ ವೃತ್ತಿ ಮಾಡುವ ಹಾಗೂ ಇಲ್ಲಿನ ಸಂಸ್ಥೆಗಳಲ್ಲಿ ಓದುತ್ತಿರುವ ಅನೇಕ ಜನರ ಆರ್ಥಿಕ ಸ್ಥಿತಿ ನಾಜೂಕಾಗಿದೆ. ಇಂತಹ ಸಂದರ್ಭದಲ್ಲಿ ಮನೆ, ಪಿಜಿ, ಹಾಸ್ಟೆಲ್ ಮಾಲೀಕರು ಎಂದಿನಂತೆ ಬಾಡಿಗೆ ವಸೂಲಿಗೆ ಇಳಿಯದೆ ಉದಾರತೆ ತೋರಲಿ. ಸರಕಾರ ಬಾಡಿಗೆ ವಿನಾಯಿತಿ ಘೋಷಿಸಿ ಜನಸಾಮಾನ್ಯನ ಕಷ್ಟಗಳಿಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com