ಉದ್ಯಮಗಳ ಆರಂಭಕ್ಕೆ ಕೇಂದ್ರದ ಅನುಮತಿಗಾಗಿ ಕಾದು ನಿಂತಿರುವ ರಾಜ್ಯ ಸರ್ಕಾರ

ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆಗಳ ಆರಂಭಕ್ಕೆ ಕಾದು ನಿಂತಿದೆ.  21 ದಿನಗಳ ಲಾಕ್ ಡೌನ್ ಅವಧಿ ಮುಗಿದಿದ್ದು, ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ.
ಪರಿಶೀಲನೆ ನಡೆಸುತ್ತಿರುವ ಪೊಲೀಸರು
ಪರಿಶೀಲನೆ ನಡೆಸುತ್ತಿರುವ ಪೊಲೀಸರು

ಬೆಂಗಳೂರು: ಆರ್ಥಿಕ ಮುಗ್ಗಟ್ಟಿನಿಂದ ಕಂಗೆಟ್ಟಿರುವ ರಾಜ್ಯ ಸರ್ಕಾರ ಆರ್ಥಿಕ ಚಟುವಟಿಕೆಗಳ ಆರಂಭಕ್ಕೆ ಕಾದು ನಿಂತಿದೆ.  21 ದಿನಗಳ ಲಾಕ್ ಡೌನ್ ಅವಧಿ ಮುಗಿದಿದ್ದು, ಕೇಂದ್ರ ಸರ್ಕಾರದ ಅನುಮತಿಗಾಗಿ ಕಾಯುತ್ತಿದೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೇ 3ರವರೆಗೆ  ಲಾಕ್ ಡೌನ್ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ. ಇದನ್ನು ಸಿಎಂ ಯಡಿಯೂರಪ್ಪ ಸ್ವಾಗತಿಸಿದ್ದು ಆರ್ಥಿಕ ಮರುಸಂಗ್ರಹಣೆಗೆ ಕಾದಿದ್ದಾರೆ.

ಕೇಂದ್ರ ಸರ್ಕಾರ ನೀಡುವ ಮಾರ್ಗಸೂಚಿಗಳನ್ನು ನಮ್ಮ ಸರ್ಕಾರ ಗಂಭೀರವಾಗಿ ಅನುಷ್ಠಾನಗೊಳಿಸುತ್ತದೆ. ಹೀಗಾಗಿ ಜನ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.

ಶನಿವಾರ ಪಿಎಂ ನರೇಂದ್ರ ಮೋದಿ ಅವರ ಜೊತೆ ನಡೆಸಿದ  ವಿಡಿಯೋ ಕಾನ್ಫರೆನ್ಸ್ ನಲ್ಲಿ ಉತ್ತರ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಆರ್ಥಿಕ ಚಟುವಟಿಕೆಗಳನ್ನು ಆರಂಭಿಸಲು ಸಲಹೆ ನೀಡಿವೆ, ಹೀಗಾಗಿ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಗಳನ್ನು ಆರಂಭಿಸಲು ಅನುಮತಿ ನೀಡುವುದೇ ಎಂಬ ಪ್ರಶ್ನೆ ಕಾಡುತ್ತಿದೆ.

ಲಾಕ್‌ ಡೌನ್ ಹೆಚ್ಚು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಪ್ರಧಾನಿ ಒತ್ತಾಯಿಸಿರುವುದರಿಂದ, ಏಪ್ರಿಲ್ 20 ರ ನಂತರವೇ ರಾಜ್ಯವು ಕೆಲವು ರಿಲಾಕ್ಸೇಷನ್ ಗಳನ್ನು ಪರಿಗಣಿಸಬಹುದು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com