ಅರಣ್ಯಗಳಲ್ಲಿ ಹೆಚ್ಚಿದ ಕಾಡ್ಗಿಚ್ಚು: ಅಧಿಕಾರಿಗಳ ಬೆವರಿಳಿಸಿದ ಸಚಿವ ಆನಂದ್ ಸಿಂಗ್

ಸಚಿವ ಆನಂದ್ ಸಿಂಗ್ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಭೆಯಲ್ಲಿ ಕಾಡಿನಲ್ಲಿ ಬೆಂಕಿ, ಅಕ್ರಮ ಬೇಟೆ ಹಾಗೂ ಕೋವಿದ್ 19 ಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಕಾಡಿನಲ್ಲಿ ಹಬ್ಬುವ ಬೆಂಕಿಯ ಬಗ್ಗೆ ಮಾಹಿತಿ ಪಡೆದು ಆಘಾತ ವ್ಯಕ್ತ ಪಡಿಸಿದ ಅವರು  ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಆನಂದ್ ಸಿಂಗ್
ಆನಂದ್ ಸಿಂಗ್

ಬೆಂಗಳೂರು: ಸಚಿವ ಆನಂದ್ ಸಿಂಗ್ ರಾಜ್ಯದ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಸಭೆಯಲ್ಲಿ ಕಾಡಿನಲ್ಲಿ ಬೆಂಕಿ, ಅಕ್ರಮ ಬೇಟೆ ಹಾಗೂ ಕೋವಿದ್ 19 ಗಾಗಿ ತೆಗೆದುಕೊಂಡಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು. ಕಾಡಿನಲ್ಲಿ ಹಬ್ಬುವ ಬೆಂಕಿಯ ಬಗ್ಗೆ ಮಾಹಿತಿ ಪಡೆದು ಆಘಾತ ವ್ಯಕ್ತ ಪಡಿಸಿದ ಅವರು  ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.

ಕಾಡು ಪ್ರಾಣಿಗಳನ್ನು ಕೊಲ್ಲುವವರ ಮೇಲೆ ಹಾಗೂ ಕಾಡನ್ನು ನಾಶ ಮಾಡುವವರ ವಿರುದ್ಧ ಕರುಣೆ ತೋರದೇ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆದೇಶಿಸಿದರು.

ಕಳೆದ ಎರಡು ವರ್ಷಗಳಲ್ಲಿ ಕಾಡಿನಲ್ಲಿ ಬೆಂಕಿ ಪ್ರಮಾಣ ಹೆಚ್ಚಿದೆ. ಅದರಲ್ಲೂ ಲಾಕ್ ಡೌನ್ ಸಮಯದಲ್ಲಿ ಏಪ್ರಿಲ್ ತಿಂಗಳಲ್ಲಿ ಅಧಿಕ ಪ್ರಮಾಣದಲ್ಲಿ ಬೆಂಕಿ ಅನಾಹುತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ,

ಅರಣ್ಯ ಅಧಿಕಾರಿಗಳ ಪ್ರಕಾರ, ಏಪ್ರಿಲ್ ತಿಂಗಳಲ್ಲಿ 1,197 ಕಾಡ್ಗಿಚ್ಚುಗಳು ವರದಿಯಾಗಿದ್ದು, 2019 ರಲ್ಲಿ 855, 2018 ರಲ್ಲಿ 577 ಮತ್ತು 2017 ರಲ್ಲಿ 568  ಕಾಡ್ಗಿಚ್ಚು ಪ್ರಕರಣಗಳು ವರದಿಯಾಗಿವೆ ಎಂದು ಅಧಿಕಾರಿಳು ಮಾಹಿತಿ ನೀಡಿದ್ದಾರೆ.

ಕಾಡ್ಗಿಚ್ಚು ನಿಯಂತ್ರಿಸುವಲ್ಲಿ ಅಧಿಕಾರಿಗಳು ಸೋಮಾರಿತನ ತೋರುತ್ತಿದ್ದಾರೆ ಎಂದು ಆನಂದ್ ಸಿಂಗ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ..
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com