ಧಾರವಾಡ: ದ್ವಿಚಕ್ರ ವಾಹನದಲ್ಲಿ 960 ಕಿ.ಮೀ. ತೆರಳಿ ರೋಗಿಗೆ ಔಷಧ ನೀಡಿ, ಮಾನವೀಯತೆ ಮೆರೆದೆ ಪೇದೆ

ಲಾಕ್'ಡೌನ್ ಪರಿಣಾಮ ಔಷಧ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಕ್ಯಾನ್ಸರ್ ರೋಗಿಯೊಬ್ಬರ ನೋವಿಗೆ ಸ್ಪಂದಿಸಿದ ಪೇದೆಯೊಬ್ಬರು ತಾವೇ ಸ್ವತಃ 960 ಕಿಮೀ ದ್ವಿಚಕ್ರ ವಾಹನದಲ್ಲಿ ತೆರಳಿ ರೋಗಿಗೆ ಔಷಧಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. 

Published: 17th April 2020 07:44 AM  |   Last Updated: 17th April 2020 12:35 PM   |  A+A-


Cop makes 960-km bike trip to deliver drug in Dharwad

ಧಾರವಾಡ: ದ್ವಿಚಕ್ರ ವಾಹನದಲ್ಲಿ 960 ಕಿ.ಮೀ ತೆರಳಿ ರೋಗಿಗೆ ಔಷಧ ನೀಡಿ, ಮಾನವೀಯತೆ ಮೆರೆದೆ ಪೇದೆ

Posted By : Manjula VN
Source : The New Indian Express

ಬೆಂಗಳೂರು: ಲಾಕ್'ಡೌನ್ ಪರಿಣಾಮ ಔಷಧ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದ ಕ್ಯಾನ್ಸರ್ ರೋಗಿಯೊಬ್ಬರ ನೋವಿಗೆ ಸ್ಪಂದಿಸಿದ ಪೇದೆಯೊಬ್ಬರು ತಾವೇ ಸ್ವತಃ 960 ಕಿಮೀ ದ್ವಿಚಕ್ರ ವಾಹನದಲ್ಲಿ ತೆರಳಿ ರೋಗಿಗೆ ಔಷಧಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. 

ಬೆಂಗಳೂರಿನ ಪೊಲೀಯ್ ಆಯುಕ್ತ ಕಚೇರಿಯ ನಿಯಂತ್ರಣ ಕೊಠಡಿ ಹೆಡ್ ಕಾನ್ಸ್'ಸ್ಟೇಬಲ್ ಎಸ್.ಕುಮಾರಸ್ವಾಮಿಯವರೇ ಸಾಮಾಜಿಕ ಕಾಳಜಿ ತೊರಿಸಿದ ಪೊಲೀಸ್ ಆಗಿದ್ದಾರೆ. ಪೇದೆಯವರು ಮಾಡಿರುವ ಕೆಲಸ ಕ್ಕೆ ಇದೀಗ ಸಾರ್ವಜನಿಕ ವಲಯದಲ್ಲಿ ಅಭಿನಂದನೆಗಳ ಮಹಾಪೂರವೈ ಹರಿದು ಬರುತ್ತಿದೆ. ಪೊಲೀಸ್ ಆಯುಕ್ತ ಭಾಸಕರ್ ರಾವ್ ಅವರೂ ಕೂಡ ಕುಮಾರಸ್ವಾಮಿಯವರಿಗೆ ಪ್ರಶಂಸನಾ ಪತ್ರ ನೀಡಿ ಅಭಿನಂದಿಸಿದ್ದಾರೆ. 

ಏ.11 ರಂದು ಖಾಸಗಿ ಸುದ್ದಿವಾಹಿನಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮಕ್ಕೆ ಕರೆ ಮಾಡಿದ್ದ ಧಾರವಾಡದ ಕ್ಯಾನ್ಸರ್ ಪೀಡಿತ ವ್ಯಕ್ತಿ, ನನಗೆ ಅಗತ್ಯವಿರುವ ಔಷಧವು ಬೆಂಗಳೂರಿನಲ್ಲಿ ಮಾತ್ರ ಸಿಗಲಿದೆ. ಈಗ ಲಾಕ್'ಡೌನ್ ನಿಂದಾಗಿ ಔಷಧ ತರಿಸಿಕೊಳ್ಳಲು ಕಷ್ಟವಾಗಿದೆ ಎಂದು ಅವರು ನೋವು ಹೇಳಿಕೊಂಡಿದ್ದರು. ಈ ಕಾರ್ಯಕ್ರಮವನ್ನು ವೀಕ್ಷಿಸಿದ ಕುಮಾರಸ್ವಾಮಿಯವರ ಹೃದಯವು ಕ್ಯಾನ್ಸರ್ ವೇದನೆಗೆ ಮಿಡಿದಿದೆ. ಹೀಗಾಗಿ ಹಿರಿಯ ಅಧಿಕಾರಿಗಳ ಅನುಮತಿ ಪಡೆದ ಅವರು, ಏ.12 ರಂದು ಬೈಕ್ ನಲ್ಲೇ ಧಾರವಾಡಕ್ಕೆ ತೆರಳಿ ಔಷಧ ತಲುಪಿಸಿ ಬೆಂಗಳೂರಿಗೆ ಮರಳಿದ್ದಾರೆ. 

ನಮ್ಮ ಹತ್ತಿರದ ಬಂಧುಗಳು ಕ್ಯಾನ್ಸರ್ ನಿಂದ ಹಿಂಸೆ ಅನುಭವಿಸಿದ್ದನ್ನು ಕಂಡಿದ್ದೆ ಸುದ್ದಿವಾಹಿನಿಯಲ್ಲಿ ಧಾರವಾಡದ ಕ್ಯಾನ್ಸರ್ ರೋಗಿ, ತನಗೆ ಔಷಧ ದೊರೆಯುತ್ತಿಲ್ಲವೆಂದಾಗ ಮನಸ್ಸಿಗೆ ನೋವಾಯಿತು. ಆ ಸುದ್ದಿವಾಹಿನಿ ಕಚೇರಿಗೆ ಕೂಡಲೇ ತೆರಳಿ ರೋಗಿಯ ಮೊಬೈಲ್ ಸಂಖ್ಯೆ ಪಡೆದು ಮಾತನಾಡಿದೆ. ಅವರಿಗೆ ಖುಷಿಯಾಯಿತು. ಬಳಿಕ ಆನ್'ಲೈನ್ ನಲ್ಲಿ ಔಷಧ ಬುಕ್ ಮಾಡಿದ ಅವರು, ನನ್ನ ವಿಳಾಸ ಕೊಟ್ಟಿದ್ದರು. ಎರಡು ತಾಸು ತಾಡವಾಗಿದ್ದರೂ ಔಷಧ ಸಿಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಹೇಳಿದ್ದಾರೆ. 

ಔಷಧಿ ಸ್ವೀಕರಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದೆ. ನಿಯಂತ್ರಣ ಕೊಠಡಿಯ ಎಸಿಪಿ ಅವರಿಗೆ ವಿಷಯ ತಿಳಿಸಿದೆ. ಕೂಡಲೇ ವಿಶೇಷ ಅನುಮತಿ ನೀಡಿದರು. ಮರುದಿನ ಮುಂಜಾನೆ 4.30ಕ್ಕೆ ಬೆಂಗಳೂರಿನಿಂದ ಬೈಕ್ ನಲ್ಲಿ ಹೊರಟು ಮಧ್ಯಾಹ್ನ 2ಕ್ಕೆ ಧಾರವಾಡ ತಲುಪಿದೆ. ಅಲ್ಲಿನ ಮಣಿನಗರದಲ್ಲಿದ್ದ ರೋಗಿಗೆ ಔಷಧ ತಲುಪಿಸಿದೆ. ಮತ್ತೆ ಸಂಜೆ 4.30ಕ್ಕೆ ಮರು ಪ್ರಯಾಣ ಆರಂಭಿಸಿದೆ. ರಾತ್ರಿ 10.30ಕ್ಕೆ ಚಿತ್ರದುರ್ಗದ ಅಗ್ನಿಶಾಮಕ ದಳ ಠಾಣೆಯಲ್ಲಿ ಕೆಲ ಗಂಟೆ ವಿಶ್ರಾಂತಿ ಪಡೆದೆ. ಮತ್ತೆ ಬೆಳಿಗ್ಗೆ 4.30ಕ್ಕೆ ಬೈಕ್ ಓಡಿಸಿಕೊಂಡು ಬೆಳಿಗ್ಗೆ 10ಕ್ಕೆ ಬೆಂಗಳೂರಿಗೆ ಸೇರಿದೆ. ನಂತರ ಕಚೇರಿಗೆ ತೆರಳಿ ಎಸಿಪಿ ಅವರಿಗೆ ಕರ್ತವ್ಯಕ್ಕೆ ವರದಿ ಮಾಡಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. 

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp