ಸರಳ ರೀತಿಯಲ್ಲಿ ನಿಖಿಲ್-ರೇವತಿ ವಿವಾಹ: ಕಾರ್ಯಕರ್ತರು, ಹಿತೈಷಿಗಳಿಗೆ ಕುಮಾರಸ್ವಾಮಿ ಕೃತಜ್ಞತೆ

ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ತಿಳಿಸಿದ್ದಾರೆ.

Published: 17th April 2020 04:31 PM  |   Last Updated: 17th April 2020 04:31 PM   |  A+A-


Nikhil-Revathi marraige

ನಿಖಿಲ್-ರೇವತಿ ಮದುವೆ

Posted By : Srinivasamurthy VN
Source : UNI

ಬೆಂಗಳೂರು: ನನ್ನ ಪುತ್ರ ನಿಖಿಲ್ ಮತ್ತು ರೇವತಿ ಅವರ ವಿವಾಹ ಇಂದು ಅತ್ಯಂತ ಸರಳ ರೀತಿಯಲ್ಲಿ ನಡೆಯಲು ಸಹಕರಿಸಿದ ಲಕ್ಷಾಂತರ ಕಾರ್ಯಕರ್ತರು ಮತ್ತು ಕುಟುಂಬದ ಹಿತೈಷಿಗಳಿಗೆ ಹೃದಯಾಂತರಾಳದ ಕೃತಜ್ಞತೆಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ  ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇಡೀ ಜಗತ್ತು ಕೊರೋನಾ ವೈರಸ್ ಎಂಬ ಮಹಾಮಾರಿಯಿಂದ ತತ್ತರಿಸುತ್ತಿರುವ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ವ್ಯವಸ್ಥಿತವಾಗಿ ಸಾಮಾಜಿಕ ಅಂತರ ಹಾಗೂ ಮುನ್ನೆಚ್ಚರಿಕೆಯ ನಡುವೆ ವಿವಾಹ ಅಚ್ಚುಕಟ್ಟಾಗಿ  ನೆರವೇರಿದೆ ಎಂದರು.

ಶಾಸಕರು, ಕಾರ್ಯಕರ್ತರು, ಮುಖಂಡರು, ಕುಟುಂಬದ ಹಿತೈಷಿಗಳು ಸೇರಿದಂತೆ ನಾಡಿನ ಲಕ್ಷಾಂತರ ಜನರು ನನ್ನ ಕುಟುಂಬದ ಕುಡಿಯ ವಿವಾಹಕ್ಕೆ ಮನೆಯಿಂದಲೇ ಹರಸಿದ್ದೀರಿ. ನಾನು ಮತ್ತು ನನ್ನ ಕುಟುಂಬ ವರ್ಗ ಮಾಡಿದ ಮನವಿಗೆ ನೀವುಗಳು ಸ್ಪಂದಿಸಿದ ರೀತಿ ಅನುಕರಣೀಯ  ಮತ್ತು ಮಾದರಿ ಎಂದು ಅವರು ತಿಳಿಸಿದ್ದಾರೆ.

ಜಗತ್ತು ಪ್ರಸಕ್ತ ಎದುರಿಸುತ್ತಿರುವ ಈ ಗಂಡಾಂತರ ಕಳೆದು ಪರಿಸ್ಥಿತಿ ಸಹಜವಾದಾಗ ನಾವು ಮತ್ತು ನೀವುಗಳು ಜತೆ ಸೇರಿ ಒಟ್ಟಿಗೆ ಕುಳಿತು ಊಟ ಮಾಡೋಣ. ನಿಮ್ಮ ಹೃದಯ ವೈಶಾಲ್ಯ ಮತ್ತು ಪ್ರೀತಿಗೆ ನಾವುಗಳು ಸದಾ ಋಣಿ. ನವದಂಪತಿಗೆ ಹರಸಿದ ಪ್ರತಿಯೊಬ್ಬರಿಗೂ ಮತ್ತೊಮ್ಮೆ  ಹೃದಯತುಂಬಿದ ಕೃತಜ್ಞತೆಗಳು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Stay up to date on all the latest ರಾಜ್ಯ news
Poll
Farmers_Protest1

ಹೊಸ ಕೃಷಿ ಕಾನೂನುಗಳ ಬಗ್ಗೆ ರೈತರನ್ನು ದಾರಿ ತಪ್ಪಿಸಲಾಗುತ್ತಿದೆಯೇ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp