ನಿಖಿಲ್ ವಿವಾಹ: ಸಂಬಂಧಪಟ್ಟ ವ್ಯಕ್ತಿಗಳ ವಿರುದ್ದ ಶೀಘ್ರದಲ್ಲೇ ಕ್ರಮ- ಡಿಸಿಎಂ ಅಶ್ವತ್ಥ ನಾರಾಯಣ

ಲಾಕ್'ಡೌನ್ ನಡುವಲ್ಲೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ.
ಡಿಸಿಎಂ ಅಶ್ವತ್ಥ್ ನಾರಾಯಣ್
ಡಿಸಿಎಂ ಅಶ್ವತ್ಥ್ ನಾರಾಯಣ್

ಬೆಂಗಳೂರು; ಲಾಕ್'ಡೌನ್ ನಡುವಲ್ಲೂ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವುದು ವ್ಯಾಪಕ ಟೀಕೆಗೆ ಕಾರಣವಾದ ಬೆನ್ನಲ್ಲೇ, ಈ ಸಂಬಂಧ ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ. 

ನಿಖಿಲ್ ಕುಮಾರಸ್ವಾಮಿ ವಿವಾಹ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ರಾಮನಗರ ಪೊಲೀಸ್ ಆಯುಕ್ತರ ಬಳಿ ಈ ಕುರಿತು ವರದಿ ಕೇಳಲಾಗಿದೆ. ವಿವಾಹಕ್ಕೂ ಮೊದಲೇ ಸಾಕಷ್ಟು ಎಚ್ಚರಿಕೆಗಳನ್ನೂ ನೀಡಲಾಗಿದೆ. ವಿವಾಹ ಸಂದರ್ಭದಲ್ಲಿ ಯಾವುದೇ ರೀತಿಯ ನಿಯಮ ಉಲ್ಲಂಘನೆಯಾಗಿರುವುದು ಕಂಡು ಬಂದಿದ್ದೇ ಆದರೆ, ಈ ಬಗ್ಗೆ ಶೀಘ್ರದಲ್ಲಿಯೇ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 

ಜವಾಬ್ದಾರಿಯುತ ನಾಯಕರು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಈ ಸಂದರ್ಭದಲ್ಲಿ ನಾವು ಇತರರಿಗೆ ಉದಾಹರಣೆಯಾಗಿ ಇರಬೇಕು. ಕಠಿಣ ಪರಿಸ್ಥಿತಿಯಲ್ಲಿ ನಮ್ಮ ವರ್ತನೆಗಳು ಇತರರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ ಎಂದು ತಿಳಿಸಿದ್ದಾರೆ. 

ಈ ಕುರಿತು ಖಂಡಿತವಾಗಿಯೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇಲ್ಲದೇ ಹೋದರೆ ವ್ಯವಸ್ಥೆ ಕುರಿತು ಅಪಹಾಸ್ಯಗಳು ಆರಂಭವಾಗುತ್ತದೆ. ಇಂತಹ ವರ್ತನೆಗಳ ವಿರುದ್ಧ ನಾವು ಕಠಿಣ ಸಂದೇಶವನ್ನು ರವಾನಿಸಬೇಕಿದೆ. ಯಾರು ಏನು ಬೇಕಾದರೂ ಮಾಡಲು ಬಿಜಡುವುದಿಲ್ಲ. ವಿವಾಹ ನಡೆಸಲು ಅನುಮತಿ ನೀಡಲು ನಿಯಮಗಳಿದ್ದು, ಈ ನಿಮಯಗಳಂತೆ ವಿವಾಹ ಕಾರ್ಯಗಳನ್ನು ನೆರವೇರಿಸಬೇಕಾಗುತ್ತದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com