ಬೆಳೆನಷ್ಟ ಪರಿಹಾರ ಅಂದಾಜಿಗೆ ಸೂಚನೆ: ಎಸ್‌.ಟಿ.ಸೋಮಶೇಖರ್

ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ಸಂಬಂಧ ನಷ್ಟದ ಅಂದಾಜು ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.
ಸಚಿವ ಎಸ್ ಟಿ ಸೋಮಶೇಖರ್
ಸಚಿವ ಎಸ್ ಟಿ ಸೋಮಶೇಖರ್

ಚಿತ್ರದುರ್ಗ: ಹೂವು, ಹಣ್ಣುಗಳು ಹಾಗೂ ತರಕಾರಿಗಳ ಬೆಳೆ ನಷ್ಟಕ್ಕೆ ಪರಿಹಾರ ಕೊಡುವ ಸಂಬಂಧ ನಷ್ಟದ ಅಂದಾಜು ಮಾಡಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಸಹಕಾರ ಹಾಗೂ ಮೈಸೂರು ಜಿಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ರೈತರು ತಾವು ಬೆಳೆದ ತೋಟಗಾರಿಕಾ ಉತ್ಪನ್ನಗಳನ್ನು ನಗರಗಳಿಗೆ ತಂದು ಮುಕ್ತವಾಗಿ ಮಾರಾಟ ಮಾಡಲು ಯಾವುದೇ ಅಡೆತಡೆಗಳು ಇಲ್ಲ. ರೈತರ ಹಿತ ಕಾಪಾಡಲು ನಮ್ಮ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಬದ್ಧ ಎಂದು ಸಚಿವರು ತಿಳಿಸಿದರು.

ಬೇರೆ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಕೊರೋನಾ ನಿಯಂತ್ರಣದಲ್ಲಿದೆ. ನಮ್ಮ ಪ್ರಧಾನಮಂತ್ರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ವಿರೋಧ ಪಕ್ಷಗಳ ಸಲಹೆ- ಸೂಚನೆಗಳನ್ನು ಪರಿಗಣಿಸಿ ಕಾರ್ಯನಿರ್ವಹಿಸುತ್ತಿರುವುದನ್ನು ಇಡೀ ದೇಶದ ಜನತೆ  ಪ್ರಶಂಸಿಸುತ್ತಿದ್ದಾರೆ ಎಂದು ಮಾಧ್ಯಮಗಳ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಾಮೂಹಿಕ ಪ್ರಾರ್ಥನೆ ಬೇಡ
ಇದೇ ವೇಳೆ ಕೊರೊನಾ ವೈರಸ್ ಹರಡುತ್ತಿರುವ ಈ ವೇಳೆ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಬೇಡ  ಸಚಿವ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ. 'ಸಾಮೂಹಿಕ ನಮಾಜ್ ಮಾಡುವಂತಿಲ್ಲ. ಮನೆಯಲ್ಲಿಯೇ ನಮಾಜ್ ಮಾಡಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ  ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ. ಅಲ್ಲದೇ ಹಣ್ಣು ತರಕಾರಿ ಬೆಳೆಗಾರರಿಗೆ ಭಯಬೇಡ.  ಹಣ್ಣು ತರಕಾರಿ ವಾಹನ ತಡೆಯಬೇಡಿ. ಹಣ್ಣು ತರಕಾರಿ ಬೆಳೆಗಳಿಗೆ ನಷ್ಟ ಪರಿಹಾರ ನೀಡಲು ಸಿಎಂ ಬಿಎಸ್ ವೈ ಭರವಸೆ ನೀಡಿದ್ದಾರೆ. ಕೃಷಿ ಉತ್ಪನ್ನಗಳನ್ನು ಬೇರೆ ರಾಜ್ಯಗಳಿಗೆ  ಸಾಗಿಸಲು  ಅನುಮತಿ ನೀಡಲಾಗಿದೆ . ಸರಬರಾಜು ಮಾಡುವ ಲಾರಿ ತಡೆಯಬೇಡಿ ಎಂದು ಎಸ್ ಟಿ ಸೋಮಶೇಖರ್ ಅಭಯ ನೀಡಿದ್ದಾರೆ. 

ರೈತರಿಗೆ 13 ಸಾವಿರ ಕೋಟಿ ರೂ. ಸಾಲ
ರೈತರಿಗೆ ಕಳೆದ ವರ್ಷ 13 ಸಾವಿರ ಕೋಟಿ ರೂಪಾಯಿ ಸಾಲ ವಿತರಿಸಲಾಗಿತ್ತು. ಈ ವರ್ಷವೂ ಅಷ್ಟೇ ಪ್ರಮಾಣದ ಸಾಲವನ್ನು ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭರವಸೆ ನೀಡಿದ್ದಾರೆ. ಚಿತ್ರದುರ್ಗದಲ್ಲಿಂದು ಮಾತನಾಡಿದ ಅವರು, ಸಾಲ ನೀಡಲು ಸರ್ಕಾರದಿಂದ ಯಾವುದೇ ಅಡೆತಡೆಗಳು ಇರುವುದಿಲ್ಲ. ಈಗಾಗಲೇ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆಗಳು ಎಂದಿನಂತೆ ನಡೆಯಲಿವೆ ಎಂದು ತಿಳಿಸಿದರು. ರೈತರ ಮುಂಗಾರು ಹಂಗಾಮಿಗೆ ಕೃಷಿ ಚಟುವಟಿಕೆಯನ್ನು ಪ್ರಾರಂಭಿಸಲು ಹೊಸದಾಗಿ ಸಹಕಾರ ಬ್ಯಾಂಕುಗಳು ಹಾಗೂ ವ್ಯವಸಾಯ ಸೇವಾ ಸಹಕಾರ ಸೊಸೈಟಿಗಳಿಂದ ಸಾಲ ನೀಡಲು ಸರ್ಕಾರದಿಂದ ಸೂಚನೆ ನೀಡಲಾಗಿದ್ದು, ಈ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com