ಬೆಂಗಳೂರು: ಕೊರೋನಾ ಹಾಟ್ ಸ್ಪಾಟ್ ಪಾದರಾಯನಪುರದಲ್ಲಿ ಪೊಲೀಸ್ ಚೆಕ್ ಪೋಸ್ಟ್ ಕಿತ್ತು ಹಾಕಿ ನೂರಾರು ಮಂದಿ ದಾಂಧಲೆ

ಬೆಂಗಳೂರಿನ ಪಾದಾರಾಯನಪುರ ಕೊರೋನಾ ಹಾಟ್ ಸ್ಪಾಟ್ ಆಗಿದ್ದು ಸೀಲ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಅಲ್ಲಿನ ಜನರು ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ರಸ್ತೆಗಿಳಿದು ಸಿಕ್ಕ ಸಿಕ್ಕಿದ್ದನ್ನೆಲ್ಲಾ ಹೊಡೆದು ದಾಂಧಲೆ ನಡೆಸಿದ್ದಾರೆ.
ಪ್ರತ್ಯಕ್ಷ ದೃಶ್ಯ
ಪ್ರತ್ಯಕ್ಷ ದೃಶ್ಯ

ಬೆಂಗಳೂರು: ಬೆಂಗಳೂರಿನ ಪಾದಾರಾಯನಪುರ ಕೊರೋನಾ ಹಾಟ್ ಸ್ಪಾಟ್ ಆಗಿದ್ದು ಸೀಲ್ ಡೌನ್ ಮಾಡಲಾಗಿತ್ತು. ಆದರೆ ಇದೀಗ ಅಲ್ಲಿನ ಜನರು ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿ ರಸ್ತೆಗಿಳಿದು ಸಿಕ್ಕ ಸಿಕ್ಕಿದ್ದನ್ನೆಲ್ಲಾ ಹೊಡೆದು ದಾಂಧಲೆ ನಡೆಸಿದ್ದಾರೆ. 

ಪಾದರಾಯನಪುರದ 58 ಕೊರೋನಾ ಶಂಕಿತರನ್ನು ಕ್ವಾರಂಟೈನ್ ಮಾಡಲು ಹೋದ ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ನೂರಾರು ಮಂದಿ ಬೀದಿಗಿಳಿದು ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. 

ಕರ್ತವ್ಯ ನಿರತ ಪೊಲೀಸರು ಕಡಿಮೆ ಸಂಖ್ಯೆಯಲ್ಲಿ ಇರುವುದನ್ನು ಗಮನಿಸಿದ ಕೆಲ ಪುಂಡರು ದಾಂಧಲೆ ನಡೆಸಿದ್ದಾರೆ. ಏಕಾಏಕಿ ವಾಹನಗಳ ಸಮೇತ ಗುಂಪು ಕಟ್ಟಿಕೊಂಡು ಬಂದು ಗಲಾಟೆ ನಡೆಸಿದರು. ಈ ವೇಳೆ ವಿಧಿಯಿಲ್ಲದೆ ಪೊಲೀಸರು ಅಲ್ಲಿಂದ ಕಾಲ್ಕಿಳಬೇಕಾಯಿತು. 

ನಂತರ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರು ಆಗಮಿಸಿದ್ದು ಸದ್ಯ ಪಾದರಾಯನಪುರದಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com