ಆರೋಗ್ಯ ಇಲಾಖೆ ನೌಕರರ ವೇತನಕ್ಕೆ 82.20 ಕೋಟಿ ರೂ.ಬಿಡುಗಡೆ: ಸಚಿವ ಬಿ ಶ್ರೀರಾಮುಲು

ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ಮಾರ್ಚ್ ನಿಂದ ಬಾಕಿಯಿದ್ದ ವೇತನ ಬಿಡುಗಡೆಗೊಳಿಸಲಾಗಿದೆ.
ಸಚಿವ ಬಿ ಶ್ರೀರಾಮುಲು
ಸಚಿವ ಬಿ ಶ್ರೀರಾಮುಲು

ಬೆಂಗಳೂರು: ಕೋವಿಡ್-19 ಸೋಂಕಿನ ವಿರುದ್ಧ ಹೋರಾಡುತ್ತಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೌಕರರಿಗೆ ಮಾರ್ಚ್ ನಿಂದ ಬಾಕಿಯಿದ್ದ ವೇತನ ಬಿಡುಗಡೆಗೊಳಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ನೌಕರರ ವೇತನಕ್ಕಾಗಿ 82.30 ಕೋಟಿ ರೂ.ಬಿಡುಗಡೆಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ಜೀವದ ಹಂಗು ತೊರೆದು ಕೊರೋನಾ ವಿರುದ್ಧ ಶ್ರಮಿಸುತ್ತಿರುವ ನಿಮ್ಮೆಲ್ಲರ ಕಾರ್ಯ ಅಭಿನಂದನಾರ್ಹ. ಕೊರೋನಾ ಎದುರಿಸುವಲ್ಲಿ ನಿಮ್ಮ ಕಾರ್ಯ ಹೀಗೆ ಮುಂದುವರಿಯಲ್ಲಿ ಎಂದು ಮನವಿ ಮಾಡಿದ್ದಾರೆ.

ಕೊರೋನ ನಿರ್ಮೂಲನೆ ಕುರಿತು ಇಂದು ಸರ್ವಪಕ್ಷ ಸಭೆ
ರಾಜ್ಯದಲ್ಲಿ ಕೋವಿಡ್-19 ತಡೆಗಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎ.19ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇನ್ನಿತರ ಪ್ರಮುಖ ಮುಖಂಡರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com