ಎಚ್ಚರ: ಸಾಮಾಜಿಕ ತಾಣದಲ್ಲಿ ಕೊವಿಡ್-19 ಸೋಂಕಿತರ ಮಾಹಿತಿ ಹಂಚಿಕೊಂಡರೆ ಕಂಬಿ ಎಣಿಸಬೇಕಾಗುತ್ತದೆ!

ಕೊರೋನಾ ವೈರಸ್ ಸೋಂಕಿತರ ಫೋಟೋ ಮತ್ತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ಪೊಲೀಸರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಸೋಂಕಿತರಿಗೆ ಚಿಕಿತ್ಸೆ (ಸಾಂಕೇತಿಕ ಚಿತ್ರ)
ಕೊರೋನಾ ಸೋಂಕಿತರಿಗೆ ಚಿಕಿತ್ಸೆ (ಸಾಂಕೇತಿಕ ಚಿತ್ರ)

ಮಂಗಳೂರು: ಕೊರೋನಾ ವೈರಸ್ ಸೋಂಕಿತರ ಫೋಟೋ ಮತ್ತು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು ಪೊಲೀಸರು ಸೋಮವಾರ ಎಚ್ಚರಿಕೆ ನೀಡಿದ್ದಾರೆ.

ನಿಯಮಗಳನ್ನು ಉಲ್ಲಂಘಿಸಿ ಕೊವಿಡ್-19 ಸೋಂಕಿತರ ಮಾಹಿತಿ ಹಂಚಿಕೊಳ್ಳುವವರ ವಿರುದ್ಧ ಕೇಸ್ ದಾಖಲಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಂ ಲಕ್ಷ್ಮಿ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊವಿಡ್-19 ಸೋಂಕಿತ ಮಹಿಳೆಯೊಬ್ಬರ ಫೋಟೋವನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದನ್ನು ಉಲ್ಲೇಖಿಸಿದ ಪೊಲೀಸರು, ಸೋಂಕಿತರ ಬಗ್ಗೆ ಸಾರ್ವಜನಿಕವಾಗಿ ಮಾಹಿತಿ ಹಂಚಿಕೊಳ್ಳುವುದು ಮತ್ತು ಫೋಟೋ ಶೇರ್ ಮಾಡುವುದು ಶಿಕ್ಷಾರ್ಹ ಅಪರಾಧ ಎಂದು ಹೇಳಿದ್ದಾರೆ.

ಸೋಂಕಿತರ ಬಗ್ಗೆ ಯಾವುದೇ ಹಂಚಿಕೊಂಡರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಭಾನುವಾರ ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊವಿಡ್-19 ರೋಗಿಯೊಬ್ಬರು ಮೃತಪಟ್ಟಿದ್ದು, ಇದು ಜಿಲ್ಲೆಯಲ್ಲಿ ಕೊವಿಡ್-19 ನಿಂದ ಮೃತಪಟ್ಟ ಮೊದಲ ಪ್ರಕರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com