ಕೊರೋನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣ: ಸ್ಥಳೀಯ ಶಾಸಕ ಜಮೀರ್ ಅಹ್ಮದ್ ಹೇಳಿದ್ದೇನು ಗೊತ್ತಾ?

ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಥಳೀಯ  ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್

ಬೆಂಗಳೂರು: ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಸ್ಥಳೀಯ  ಶಾಸಕ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ.

ಘಟನೆ ನಡೆದ ಸುಮಾರು ಗಂಟೆಗಳ ಬಳಿಕ ಇದೇ ಮೊದಲ ಬಾರಿಗೆ ಈ ಕುರಿತು ಟ್ವೀಟ್ ಮಾಡಿರುವ ಚಾಮರಾಜಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್, 'ನಿನ್ನೆ ಪಾದರಾಯನಪುರ ಬಡಾವಣೆಯಲ್ಲಿ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆಯ  ಸಿಬ್ಬಂದಿಗಳ ಮೇಲೆ ಸ್ಥಳೀಯ ನಿವಾಸಿಗಳು ಹಲ್ಲೆಗೆ ಯತ್ನಿಸಿರುವುದು ದುಃಖಕರ. ಸರ್ಕಾರ, ವೈದ್ಯಕೀಯ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿರುವುದು ನಿಮ್ಮ ಕ್ಷೇಮಕ್ಕಾಗಿ. ಅವರೊಂದಿಗೆ ಸಹಕರಿಸಿ, ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇನೆ ಎಂದು  ಟ್ವೀಟ್ ಮಾಡಿದ್ದಾರೆ.

ನಿನ್ನೆ ಕೊರೋನಾ ಸೋಂಕಿತರ ಸಂಪರ್ಕಕ್ಕೆ ಬಂದಿದ್ದ ಮಂದಿಯನ್ನು ಕ್ವಾರಂಟೈನ್ ಮಾಡಲು ಹೋಗಿದ್ದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲೆ ಪಾದರಾಯನಪುರದ ನಿವಾಸಿಗಳ ಪೈಕಿ ಕೆಲವರ ಗುಂಪು ಹಲ್ಲೆ ಮಾಡಿತ್ತು. ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಮತ್ತು  ಟೆಂಟ್ ಗಳನ್ನು ಧ್ವಂಸಗೊಳಿಸಿದ್ದಾರೆ. ಪೊಲೀಸ್ ಸಿಬ್ಬಂದಿ ಕಡಿಮೆ ಸಂಖ್ಯೆಯಲ್ಲಿರೋದನ್ನು ಗಮನಿಸಿದ ಪುಡಿ ರೌಡಿಗಳು ದಾಂಧಲೆಯನ್ನು ನಡೆಸಿದ್ದರು. ಈ ವೇಳೆ ಪೊಲೀಸರೇ ಕೈ ಮುಗಿದು ಹೀಗೆ ಮಾಡಬೇಡಿ ಎಂದು ಬೇಡಿಕೊಂಡರೂ ಕೇಳದ ಪುಂಡರು, ಪೊಲೀಸರ ಮೇಲೆ ಹಲ್ಲೆ  ಮಾಡಿದ್ದಾರೆ. ಅಲ್ಲದೆ ಪೊಲೀಸರು ನಿರ್ಮಿಸಿಕೊಂಡಿದ್ದ ಟೆಂಟ್ ಮತ್ತು ಟೇಬಲ್ ಗಳನ್ನು ಮುರಿದು ಕೌರ್ಯ ಮೆರೆದಿದ್ದರು. ಮಹಿಳೆಯರೂ ಎಂದೂ ನೋಡದೆ ಆಶಾ ಕಾರ್ಯಕರ್ತೆಯರನ್ನೂ ಅಟ್ಟಾಡಿಸಿಕೊಂಡು ಹೋಗಿ ಹಲ್ಲೆಗೆ ಮುಂದಾಗಿದ್ದರು.

ಘಟನೆಗೆ ಸಂಬಂಧಿಸಿದಂತೆ ಇದೀಗ ದೇಶವ್ಯಾಪಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com