ರಾಜ್ಯದಲ್ಲಿ ಹೆಚ್ಚುತ್ತಲೇ ಇದೆ ಕೊರೋನಾ ಪ್ರಭಾವ: ಲಾಕ್'ಡೌನ್ ವಿಸ್ತರಣೆ ಕುರಿತು ಇಂದು ಸಚಿವ ಸಂಪುಟ ನಿರ್ಧಾರ

ರಾಜ್ಯದ ಆರ್ಥಿಕ ಪುನಶ್ಚೇತನಕ್ಕಾಗಿ ಲಾಕ್'ಡೌನ್ ಸಡಿಲಗೊಳಿಸುವುದು ಸೇರಿದಂತೆ ಇತೆರ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವ ಸಂಪುಟ ಸಭೆ ಕರೆದಿದ್ದು, ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ರಾಜ್ಯದ ಆರ್ಥಿಕ ಪುನಶ್ಚೇತನಕ್ಕಾಗಿ ಲಾಕ್'ಡೌನ್ ಸಡಿಲಗೊಳಿಸುವುದು ಸೇರಿದಂತೆ ಇತೆರ ವಿಚಾರಗಳ ಕುರಿತು ಚರ್ಚಿಸುವ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಸಚಿವ ಸಂಪುಟ ಸಭೆ ಕರೆದಿದ್ದು, ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆಗಳಿವೆ. 

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಹಾಟ್'ಸ್ಪಾಟ್ ಪ್ರದೇಶದಲ್ಲಿ ತೀವ್ರ ಅವಲೋಕನ ನಡೆಸಲಾಗಿದೆ. ೀ ವೇಳೆಯೂ ಕೊರೋನಾ ವೈರಸ್ ತಹಬದಿಗೆ ಬಂದಿಲ್ಲ. ಈ ನಡುವೆ ರಾಜ್ಯದ ಆರ್ಥಿಕತೆಯೂ ಸಂಕಷ್ಟದಲ್ಲಿದ್ದು, ಆರ್ಥಿಕ ಚಟುವಟಿಕೆಗಳನ್ನು ಪುನರಾರಂಬಿಶಲು ಲಾಕ್'ಡೌನ ಸಡಿಲಗೊಳಿಸಬೇಕು ಎಂಬುದರ ಬಗ್ಗೆ ಈಗಾಗಲೇ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಇದಕ್ಕೆ ವಿಧಿಸಬೇಕಾದ ನಿಬಂಧನಗಳ ಕುರಿತು ಹಾಗೂ ನಿಬಂಧನೆಗಳ ಪಾಲನೆಯಾಗುತ್ತಿರುವ ಬಗ್ಗೆ ಮೇಲ್ವಿಚಾರಣೆ ವಹಿಸಲು ತಂಡಗಳನ್ನು ರಚಿಸುವ ಬಗ್ಗೆ ಸಚಿವ ಸಂಪುಟ ಸಬೆಯಲ್ಲಿ ಚರ್ಚೆ ನಡೆಯಲಿದೆ. 

ಆದಾಯ  ತಂಡುಕೊಡಬಲ್ಲ ಮದ್ಯ ಮಾರಾಟ ಮೇ.3ರವರೆಗೆ ನಿಷೇಧಿಸಲಾಗಿದೆ. ಹೀಗಾಗಿ ಅಬಕಾರಿ ಇಲಾಖೆ ಹೊರತುಪಡಿಸಿ ಸರಕು ಮತ್ತು ಸೇವಾ ತೆರಿಗೆ, ವಾಣಿಜ್ಯ ತೆರಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಕೆಗಳಿಗೆ ಕೆಲವು ನಿಬಂಧನೆಗಳೊಂದಿಗೆ ಕೆಲಸ ಮಾಡಲು ಅನುವು ಮಾಡಿಕೊಡಲಾಗುವುದು. ಈಗಾಗಲೇ ಸರ್ಕಾರ ಘೋಷಣೆ ಮಾಡಿರುವಂತೆ ಶೇ.33ರಷಅಟು ಸಿಬ್ಬಂದಿ ಕಾರ್ಯನಿರ್ವಹಣೆಗೆ ಅವಕಾಶ ಮಾಡುವ ಕುರಿತು ಸಮಾಲೋಚನೆ ನಡೆಯುವ ಸಾಧ್ಯತೆ ಇದೆ. 

ಸಾಮಾಜಿಕ ಅಂತರ ಕಾಯ್ದುಕೊಂಡು ಆರ್ಥಿಕ ಚಟುವಟಿಕೆಯನ್ನು ಪ್ರಾರಂಭಿಸುವ ಬಗ್ಗೆ ಆಲೋಚನೆ ಮಾಡಲಾಗಿದೆ. ಅಗತ್ಯ ಸೇವೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡದೆ ಮೇ.3ರವರೆಗೆ ಲಾಕ್'ಡೌನ್ ಮುಂದುವರಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಅಧಿಕೃತವಾಗಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com