ಪೊಲೀಸರು, ಪತ್ರಕರ್ತರಿಗೆ ಕೊರೋನಾ ಪರೀಕ್ಷೆ: ಸಚಿವ ಕೆ ಸುಧಾಕರ್

ಕೊರೋನಾ ಭೀತಿಯ ಸಂದರ್ಭದಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಕೊರೋನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೊನಾ ಭೀತಿಯ ಸಂದರ್ಭದಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ, ಮಾಧ್ಯಮ ಪ್ರತಿನಿಧಿಗಳು ಕೊರೋನಾ ವೈರಾಣು ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ಬಿಕ್ಕಟ್ಟಿನ ಸವಾಲಿನ ಸನ್ನಿವೇಶಗಳಲ್ಲಿ ಬಾಹ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸರು, ದೃಶ್ಯ ಮಾಧ್ಯಮ ಪ್ರತಿನಿಧಿಗಳು ಸೋಂಕಿನಿಂದ ಬಾಧಿತರಾಗದಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರದ ಯಾವುದೇ ಪರೀಕ್ಷಾ  ಕೇಂದ್ರದಲ್ಲಿ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ದೇಶಾದ್ಯಂತ ಲಾಕ್​ಡೌನ್ ವಿಧಿಸಲಾಗಿದೆ. ಪರಿಣಾಮ ಜನರೆಲ್ಲಾ ಮನೆಯಲ್ಲೇ ಕಾಲ ಕಳೆಯುವಂತಾಗಿದೆ. ಆದರೆ, ಇಂಥ ಪರಿಸ್ಥಿತಿಯಲ್ಲೂ ಪೊಲೀಸರು ಹಾಗೂ ಮಾಧ್ಯಮದವರು ಎಲ್ಲೆಡೆ ಕಾರ್ಯ ನಿರ್ವಹಿಸುತ್ತಿದ್ದಾರೆ. ಹೀಗಾಗಿ ಇವರಿಗೂ  ಸೋಂಕು ಹರಡುವ ಸಾಧ್ಯತೆ ಇದೆ. ಉದಾಹರಣೆ ಎಂಬಂತೆ ಮುಂಬೈನಲ್ಲಿ 53 ಪತ್ರಕರ್ತರಲ್ಲಿ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ. ಹೀಗಾಗಿ ರಾಜ್ಯದಲ್ಲಿರುವ ಪೊಲೀಸ್​ ಇಲಾಖೆಯ ಸಿಬ್ಬಂದಿ ಹಾಗೂ ಮಾಧ್ಯಮದವರು ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು  ವೈದ್ಯಕೀಯ ಸಚಿವ ಡಾ. ಕೆ. ಸುಧಾಕರ್​ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್​ ಒಂದನ್ನು ಸಚಿವ ಡಾ. ಕೆ. ಸುಧಾಕರ್ ಮಾಡಿದ್ದು, ಕೊರೊನಾ ಬಿಕ್ಕಟ್ಟಿನ ಈ ಸವಾಲಿನ ಸನ್ನಿವೇಶದಲ್ಲಿ, ವಿಶೇಷವಾಗಿ ಪೊಲೀಸರು, ದೃಶ್ಯಮಾಧ್ಯಮ ಪ್ರತಿನಿಧಿಗಳು ಬಾಹ್ಯ ಪ್ರದೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸೋಂಕಿನಿಂದ ಬಾಧಿತರಾಗದಿರುವುದನ್ನು  ಖಚಿತಪಡಿಸಿಕೊಳ್ಳಲು ಇವರುಗಳು ಸರ್ಕಾರದ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ಕೂಡಲೇ ಒಮ್ಮೆ ಪರೀಕ್ಷಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ ಅಂತಾ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com