ಮಂಗಳೂರು: ಕೊರೋನಾದಿಂದ ಮೃತಪಟ್ಟ ಮಹಿಳೆಯ ನೆರೆಮನೆಯಾಕೆಗೆ ಸೋಂಕು ದೃಢ

ಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷ ಪ್ರಾಯದ ವೃದ್ಧೆಯೊಬ್ಬರಿಗೆ ಕೊವಿಡ್ - 19 ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ 67 ವರ್ಷ ಪ್ರಾಯದ ವೃದ್ಧೆಯೊಬ್ಬರಿಗೆ ಕೊವಿಡ್ - 19 ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ತಿಳಿಸಿದೆ.

ಈ ಬಗ್ಗೆ ಮಂಗಳವಾರ ಬೆಳಗ್ಗೆ ಬುಲೆಟಿನ್ ಬಿಡುಗಡೆ ಮಾಡಿರುವ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ವೃದ್ಧೆಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ. ಈ ಮಹಿಳೆ ಕೊರೋನಾ ವೈರಸ್ ಸೋಂಕಿನಿಂದ ಭಾನುವಾರ ವೆನ್‌ಲಾಕ್‌ ಆಸ್ಪತ್ರೆಯಲ್ಲಿ ಮೃತಪಟ್ಟ ಬಂಟ್ವಾಳ ಪೇಟೆಯ ಮಹಿಳೆಯ ನೆರೆ ಮನೆಯ ಮಹಿಳೆ ಎಂದು ತಿಳಿದು ಬಂದಿದೆ.

ಮೃತ ಮಹಿಳೆಯ ಸಂಪರ್ಕದಿಂದ ಇವರಿಗೂ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಈ ಮಹಿಳೆಯನ್ನು ಏಪ್ರಿಲ್ 18ರಂದು ಮಂಗಳೂರು ಕೊವಿಡ್ - 19 ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಕೊವಿಡ್ - 19 ಪರೀಕ್ಷೆಗೆ ಕಳುಹಿಸಿದ್ದ ವೃದ್ಧೆಯ ಗಂಟಲ ದ್ರವ ಮಾದರಿಯ ವರದಿ ಇಂದು ಬಂದಿದ್ದು ಅದರಲ್ಲಿ ಪಾಸಿಟಿವ್ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com