ನಿಖಿಲ್ ಕುಮಾರಸ್ವಾಮಿ ಮದುವೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಲಾಗಿತ್ತೆ: ಹೈಕೋರ್ಟ್ ಪ್ರಶ್ನೆ

ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ  ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೂಚಿಸಿದೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಸಮಾರಂಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲಾಗಿತ್ತೇ  ಎಂದು ರಾಜ್ಯ ಸರ್ಕಾರಕ್ಕೆ  ಹೈಕೋರ್ಟ್ ಸೂಚಿಸಿದೆ

ಕೋವಿಡ್-19 ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಈ ಸಂಬಂಧ ವಿವರ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. 

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆದ ವಿಚಾರಣೆ ವೇಳೆ ನ್ಯಾಯಪೀಠ ನಿಖಿಲ್ ಕುಮಾರಸ್ವಾಮಿ ಮದುವೆ ವಿಚಾರ ಪ್ರಸ್ತಾಪಿಸಿತು. ಮದುವೆಯಲ್ಲಿ ಎಷ್ಟು ಜನ ಭಾಗವಹಿಸಿದ್ದರು, ಸಮಾರಂಭದಲ್ಲಿ ಅಂತರವನ್ನು ಕಾಯ್ದುಕೊಳ್ಳಲಾಗಿತ್ತೇ ಎಂಬ ಬಗ್ಗೆ  ಪರಿಶೀಲನೆ ನಡೆಸಿ  ವರದಿ ಸಲ್ಲಿಸಿ ಎಂದು ಸರ್ಕಾರಿ ವಕೀಲರಿಗೆ ಸೂಚಿಸಿತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com