ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಧನಸಹಾಯಕ್ಕಾಗಿ ಅರ್ಜಿ ಆಹ್ವಾನ

ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ರಾಜ್ಯ ಲಾಕ್ ಡೌನ್‌ ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಉದ್ದೇಶಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ-ಸಂಗ್ರಹ ಚಿತ್ರ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ-ಸಂಗ್ರಹ ಚಿತ್ರ

ಬೆಂಗಳೂರು: ಕೋವಿಡ್-19 ಹರಡುವಿಕೆ ತಡೆಗಟ್ಟುವ ಹಿನ್ನೆಲೆಯಲ್ಲಿ ಇಡೀ ರಾಜ್ಯ ಲಾಕ್ ಡೌನ್‌ ಆಗಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರು/ಸಾಹಿತಿಗಳಿಗೆ ಆರ್ಥಿಕ ಸಹಾಯ ಮಾಡಲು ಉದ್ದೇಶಿಸಲಾಗಿದೆ.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಎಲ್ಲಾ ಕಲಾವಿದರು/ಸಾಹಿತಿಗಳು ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ನಿರತ ಕಲಾವಿದರಾಗಿದ್ದು, ಕನಿಷ್ಠ 10 ವರ್ಷ ಕಲಾಸೇವೆ ಸಲ್ಲಿಸಿರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಸಾಶನ ಪಡೆಯುತ್ತಿರಬಾರದು. ಮತ್ತು ಯಾವುದೇ ಸರ್ಕಾರಿ  (ರಾಜ್ಯ/ಕೇಂದ್ರ/ನಿಗಮ/ಮಂಡಳಿ/ಸರ್ಕಾರಿ ಅನುದಾನಿತ ಸಂಸ್ಥೆಗಳು ಮತ್ತು ಅರೆ ಸರಕಾರಿ ಸಂಸ್ಥೆಗಳು) ನೌಕರರಾಗಿರಬಾರದು. 

ಈ ವ್ಯಾಪ್ತಿಗೆ ಒಳಪಡುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಲಾವಿದರು/ಸಾಹಿತಿಗಳು ತಮ್ಮ ಹೆಸರು, ವಿಳಾಸ, ಕಲಾಪ್ರಕಾರ, ಆಧಾರ್ ಸಂಖ್ಯೆ, ದೂರವಾಣಿ ಸಂಖ್ಯೆ ಮತ್ತು ಬ್ಯಾಂಕ್ ಖಾತೆ ಸಂಖ್ಯೆ, ಬ್ರಾಂಚ್ ಹಾಗೂ ಐ.ಎಫ್.ಎಸ್.ಸಿ. ಕೋಡ್ (ಬ್ಯಾಂಕ್ ಪುಸ್ತಕದ ಜೆರಾಕ್ಸ್ ಪ್ರತಿ  ಲಗತ್ತಿಸಿ) ವಿವರಗಳನ್ನು ಒಳಗೊಂಡ ಅರ್ಜಿಯನ್ನು ಬಿಳಿ ಹಾಳೆಯ ಮೇಲೆ ಸ್ವವಿವರವನ್ನು ಸಿದ್ದಪಡಿಸಿ, ಏಪ್ರಿಲ್ 27 ರೊಳಗಾಗಿ ಇ-ಮೇಲ್ ವಿಳಾಸ: dkc.bangarural@gmail.com ಗೆ ಹಾಗೂ ಮೊಬೈಲ್ ಸಂಖ್ಯೆ: 7760599579/ 8746939150 ಗೆ ವಾಟ್ಸಪ್ ಮಾಡಬಹುದಾಗಿದೆ.

ತಪ್ಪು ಮಾಹಿತಿ ನೀಡಿ ಇದರ ಲಾಭ ಪಡೆದವರ ಮೇಲೆ ವಿಪತ್ತು ನಿರ್ವಹಣಾ ಅಧಿನಿಯಮದನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com