ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಪ್ರಯೋಗಕ್ಕೆ ಐಸಿಎಂಆರ್ ಅನುಮತಿ

ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಯಶಸ್ಸಿ ಕಂಡ ಬೆನ್ನಲ್ಲೇ ರಾಜ್ಯದ ಕೊರೋನಾ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ಥರೆಪಿ ಚಿಕಿತ್ಸೆ ಪ್ರಯೋಗಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಒಪ್ಪಿಗೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ದೆಹಲಿಯಲ್ಲಿ ಪ್ಲಾಸ್ಮಾ ಥೆರಪಿ ಯಶಸ್ಸಿ ಕಂಡ ಬೆನ್ನಲ್ಲೇ ರಾಜ್ಯದ ಕೊರೋನಾ ಸೋಂಕಿತ ರೋಗಿಗಳಿಗೆ ಪ್ಲಾಸ್ಮಾ ಥರೆಪಿ ಚಿಕಿತ್ಸೆ ಪ್ರಯೋಗಕ್ಕೆ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್‌) ಒಪ್ಪಿಗೆ ನೀಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದ್ದಾರೆ.

ಕೋವಿಡ್‌-19 ರೋಗಿಗಳಿಗೆ ಪ್ಲಾಸ್ಮಾ ಥೆರಪಿಯು ಉತ್ತಮ ಭರವಸೆಯಾಗಿದೆ. ಐಸಿಎಂಆರ್‌ ನಮ್ಮ ಮನವಿಗೆ ಸ್ಪಂದಿಸಿದ್ದು, ಎಚ್‌ಸಿಜಿ ಬೆಂಗಳೂರು ಇನ್ಸ್ಟಿಟ್ಯೂಟ್‌ ಆಫ್‌ ಆಂಕೊಲಾಜಿಯ ಡಾ. ವಿಶಾಲ್‌ ರಾವ್‌ ಅವರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಲು ಅನುಮತಿ ನೀಡಿದೆ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ ಎಂಬುದಾಗಿ ಸುಧಾಕರ್‌ ಟ್ವೀಟ್ ಮಾಡಿದ್ದಾರೆ.

ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡವರ ದೇಹದಿಂದ ರೋಗ ನಿರೋಧಕ ಕಣಗಳನ್ನು ತೆಗೆದು, ಅದನ್ನು ಮತ್ತೋರ್ವ ರೋಗಿಯ ದೇಹಕ್ಕೆ ಸೇರಿಸುವ ಚಿಕಿತ್ಸೆಗೆ ಪ್ಲಾಸ್ಮಾ ಥೆರಪಿ ಎನ್ನುತ್ತಾರೆ. ಒಬ್ಬ ವ್ಯಕ್ತಿಯ ದೇಹದಿಂದ ಎರಡು ಡೋಸ್‌ನಷ್ಟು ಪ್ರತಿರೋಧ ಕಣಗಳನ್ನು ತೆಗೆಯಬಹುದು. ಒಬ್ಬ ರೋಗಿಗೆ ಒಂದು ಡೋಸ್‌ನಷ್ಟು ಪ್ರತಿರೋಧ ಕಣಗಳನ್ನು ನೀಡಬೇಕಾಗುತ್ತದೆ. ಅಂದರೆ ಚೇತರಿಸಿಕೊಂಡ ಓರ್ವ ರೋಗಿಯಿಂದ ಇಬ್ಬರಿಗೆ ಈ ರೀತಿ ಪ್ರತಿರೋಧ ಕಣಗಳನ್ನು ನೀಡಬಹುದಾಗಿದೆ.

ಪ್ಲಾಸ್ಮಾ ಥೆರಪಿ ಅಳವಡಿಸಿಕೊಳ್ಳಲು ಅನುಮತಿ ನೀಡಲು ಐಸಿಎಂಆರ್‌ಗೆ ರಾಜ್ಯ ಮನವಿ ಮಾಡಿತ್ತು. ಇದಕ್ಕೆ ಸ್ಪಂದಿಸಿದ ಐಸಿಎಂಆರ್‌ ಎಚ್‌ಸಿಜಿ ಬೆಂಗಳೂರು ಇನ್ಸ್ಟಿಟ್ಯೂಟ್‌ ಆಫ್ ಆಂಕಾಲಾಜಿಯ ಡಾ|ವಿಶಾಲ್‌ ರಾವ್‌ ನೇತೃತ್ವದ ತಜ್ಞ ವೈದ್ಯರ ತಂಡದಿಂದ ಪ್ಲಾಸ್ಮಾ ಚಿಕಿತ್ಸೆ ಅಧ್ಯಯನ ಆರಂಭಿಸಲು ಅನುಮತಿ ನೀಡಿದೆ.  ಕೋವಿಡ್‌ 19 ವೈರಸ್‌ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ವಿಕ್ಟೋರಿಯಾ ಆಸ್ಪತ್ರೆಯೊಂದಿಗೆ ಒಪ್ಪಂದ ಮಾಡಿಕೊಂಡು ಕೆಲವು ಸೋಂಕಿತರ ಮೇಲೆ ತಮ್ಮ ತಂಡ ಅಧ್ಯಯನ ಮಾಡಲಿದೆ ಎಂದು ಡಾ. ವಿಶಾಲ್ ರಾವ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com