ಲಾಕ್‌ ಡೌನ್‌ನಿಂದ ಸಾರಿಗೆ ಸಂಸ್ಥೆಗೆ 816.23 ಕೋಟಿ ರೂ. ನಷ್ಟ

ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಲು ಸರ್ಕಾರವು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ಕ್ಕೆ ಇದುವರೆಗೆ 816.23 ಕೋಟಿ ರೂ. ನಷ್ಟ ಉಂಟಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ವೈರಸ್ ಸೋಂಕು ಹರಡದಂತೆ ಎಚ್ಚರ ವಹಿಸಲು ಸರ್ಕಾರವು ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ ಟಿಸಿ)ಕ್ಕೆ ಇದುವರೆಗೆ 816.23 ಕೋಟಿ ರೂ. ನಷ್ಟ ಉಂಟಾಗಿದೆ.

ಲಾಕ್‌ ಡೌನ್ ಹಿನ್ನೆಲೆಯಲ್ಲಿ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವ ಸಾರ್ವಜನಿಕ ಪ್ರಯಾಣಿಕರ ಹಿತದೃಷ್ಟಿಯಿಂದ ಕರ್ನಾಟಕ ರಾಜ್ಯದ ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ  ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗಳು ಎಲ್ಲಾ ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ. ಸಾರಿಗೆ ಸೇವೆಗಳ ಕಾರ್ಯಾಚರಣೆಯನ್ನು ಸ್ಥಗಿತ ಗೊಳಿಸಿರುವುದರಿಂದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಇದುವರೆಗೆ ಒಟ್ಟಾರೆ ರೂ.816.23  ಕೋಟಿ ಸಾರಿಗೆ ಆದಾಯ ನಷ್ಟವಾಗಿರುತ್ತದೆ ಎಂದು ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಸ್ಥೆವಾರು ವಿವರಗಳು ಏಪ್ರಿಲ್ 20ರವರೆಗೆ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ- 214.89 ಕೋಟಿ
ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ-172 ಕೋಟಿ
ಈಶಾನ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: 180 ಕೋಟಿ
ಬಿಎಂಟಿಸಿ- 149.34 ಕೋಟಿ
ಒಟ್ಟು 816.23 ಕೋಟಿ
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com