​ಹಸಿವಿಗೆ ಜಾತಿ, ಧರ್ಮವಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ: ಸಿದ್ದರಾಮಯ್ಯ

ಹಸಿವಿಗೆ ಜಾತಿ ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಹಸಿವಿಗೆ ಜಾತಿ ಧರ್ಮ, ಪಕ್ಷ ಮತ್ತು ಪಂಗಡ ಎಂಬುದು ಇರುವುದಿಲ್ಲ, ಹಸಿದವರನ್ನು ರಾಜಕೀಯದ ಕಣ್ಣುಗಳಿಂದ ನೋಡಬೇಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಕ್ಷೇತ್ರದ ಶಾಸಕ ರಾಮಲಿಂಗಾರೆಡ್ಡಿ ಬಿಟಿಎಂ ಲೇಔಟ್ ನಲ್ಲಿ ಆರಂಭಿಸಿರುವ ಅನ್ನ ದಾಸೋಹ ಕೇಂದ್ರಕ್ಕೆ ಭೇಟಿ ನೀಡಿ ಅಡುಗೆ ತಯಾರಿ ವೀಕ್ಷಿಸಿದರು. ಕ್ಷೇತ್ರದ ವಿವಿಧ ಬಡಾವಣೆಗಳಿಗೆ ತೆರಳಿ ಜನರಿಗೆ ಆಹಾರದ ಪ್ಯಾಕೆಟ್‍ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಬಿಟಿಎಂ ವಿಧಾನಸಭೆ ಕ್ಷೇತ್ರದಲ್ಲಿ ರಾಮಲಿಂಗಾರೆಡ್ಡಿ ಅವರು ದವಸ, ಧಾನ್ಯ, ಆಹಾರ, ತರಕಾರಿಯನ್ನು ಬಡವರು, ವಲಸಿಗ ಕಾರ್ಮಿಕರಿಗೆ ಲಾಕ್‍ಡೌನ್ ಆದಾಗಿನಿಂದ ವಿತರಣೆ ಮಾಡುತ್ತಿದ್ದಾರೆ. 48 ಸಾವಿರ ಜನರಿಗೆ ನಿತ್ಯ ಅವರಿಂದಾಗಿ ಅನ್ನ ದಾಸೋಹ ನಡೆಯುತ್ತಿದೆ. ಅವರ ಈ ಕಾರ್ಯ ಶ್ಲಾಘನೀಯ. ಇದಕ್ಕಾಗಿ ನಾನು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಸರ್ಕಾರ ಹಸಿದವರಿಗೆ ಆಹಾರದ ಪ್ಯಾಕೇಟ್ ನೀಡುವುದಾಗಿ ಹೇಳಿದೆ. ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಗಳಲ್ಲಿ ಸಮರ್ಪಕವಾಗಿ ವಿತರಣೆಯಾಗುತ್ತಿಲ್ಲ. ರಾಮಲಿಂಗಾರೆಡ್ಡಿಯವರು ಒತ್ತಡ ಹೇರಿದ ಕಾರಣಕ್ಕೆ ಅವರ ಕ್ಷೇತ್ರಕ್ಕಾಗಿ ಸರ್ಕಾರದ ಕಡೆಯಿಂದ ಕೇವಲ ಐದು ಸಾವಿರ ಪ್ಯಾಕೇಟ್ ಬರುತ್ತಿದೆ. ಆದರೆ ರಾಮಲಿಂಗಾರೆಡ್ಡಿಯವರು ಸ್ವಂತ ಖರ್ಚಿನಲ್ಲಿ ಸಂಘ, ಸಂಸ್ಥೆಗಳ ನೆರವಿನೊಂದಿಗೆ ಊಟ, ತಿಂಡಿ, ದಿನಸಿ, ತರಕಾರಿ ವಿತರಣೆ ಮಾಡುತ್ತಿದ್ದಾರೆ. ಮನುಷ್ಯತ್ವ, ಮಾನವೀಯತೆಯಿಂದ ರೆಡ್ಡಿಯವರು ಈ ಕೆಲಸ ಮಾಡುತ್ತಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com