ಗೊಂದಲ, ಆತಂಕ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಕೊರೋನಾ ಸೋಂಕಿತೆ ವೃದ್ಧೆಯ ಅಂತ್ಯ ಸಂಸ್ಕಾರ

ಕೊರೋನಾ ಸೋಂಕಿತ 75 ವರ್ಷ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರು ಸಮೀಪ ಪಚನಾಡಿ ಸ್ಥಳೀಯರು ಅಡ್ಡಿಪಡಿಸಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಮಂಗಳೂರು ನಗರದ ಹೊರವಲಯದಲ್ಲಿ ಪೊಲೀಸರ ತೀವ್ರ ಭದ್ರತೆ ನಡುವೆ ಅಂತ್ಯಸಂಸ್ಕಾರ ಮಾಡಬೇಕಾದ ಪ್ರಸಂಗ ಶುಕ್ರವಾರ ಬೆಳಗ್ಗೆ ನಡೆಯಿತು.
ಗೊಂದಲ, ಆತಂಕ ಸೃಷ್ಟಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಎರಡನೇ ಕೊರೋನಾ ಸೋಂಕಿತೆ ವೃದ್ಧೆಯ ಅಂತ್ಯ ಸಂಸ್ಕಾರ

ಮಂಗಳೂರು: ಕೊರೋನಾ ಸೋಂಕಿತ 75 ವರ್ಷ ವೃದ್ಧೆಯ ಅಂತ್ಯ ಸಂಸ್ಕಾರಕ್ಕೆ ಮಂಗಳೂರು ಸಮೀಪ ಪಚನಾಡಿ ಸ್ಥಳೀಯರು ಅಡ್ಡಿಪಡಿಸಿದ್ದರಿಂದ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಮಂಗಳೂರು ನಗರದ ಹೊರವಲಯದಲ್ಲಿ ಪೊಲೀಸರ ತೀವ್ರ ಭದ್ರತೆ ನಡುವೆ ಅಂತ್ಯಸಂಸ್ಕಾರ ಮಾಡಬೇಕಾದ ಪ್ರಸಂಗ ಶುಕ್ರವಾರ ಬೆಳಗ್ಗೆ ನಡೆಯಿತು.

ವೃದ್ಧೆಯ ಅಂತ್ಯಸಂಸ್ಕಾರವನ್ನು ಮಂಗಳೂರು ಸಮೀಪ ಹಿಂದೂ ರುದ್ರಭೂಮಿಯಲ್ಲಿ ಮಾಡುವುದಕ್ಕೆ ಮಹಿಳೆಯರು, ಮಕ್ಕಳು ಪಚನಾಡಿ ಬಳಿ ಬೃಹತ್ ಸಂಖ್ಯೆಯಲ್ಲಿ ಸೇರಿ ವಿರೋಧ ವ್ಯಕ್ತಪಡಿಸಿದ್ದರು.ಇದರ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರಿಂದ ವ್ಯಾಪಕ ವೈರಲ್ ಆಗಿ ಭೀತಿಯ ವಾತಾವರಣ ಉಂಟಾಗಿತ್ತು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ಸ್ಥಳೀಯರ ಅನುಮತಿ ಇಲ್ಲದೆ ಅಂತ್ಯ ಸಂಸ್ಕಾರ ಮಾಡಬೇಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡರು. ಹೀಗಾಗಿ ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಶವ ಸಂಸ್ಕಾರ ಸ್ಥಳವನ್ನು ಬದಲಾಯಿಸಲು ನಿರ್ಧರಿಸಿದರು.

ಮೃತದೇಹ ಕೈಕುಂಜೆ ಶವಾಗಾರಕ್ಕೆ ತಂದಾಗ ಸ್ಥಳೀಯರು ವಿರೋಧಿಸಿದರು. ನಂತರ ಪೊಲೀಸರ ತೀವ್ರ ಭದ್ರತೆ ನಡುವೆ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಂತ್ಯಸಂಸ್ಕಾರ ಮಾಡಲಾಯಿತು. ಇದಕ್ಕೂ ಮುನ್ನ ಅಧಿಕಾರಿಗಳು ಬಂಟ್ವಾಳದ ಬಡ್ಡಕಟ್ಟೆ ಶವಾಗಾರದಲ್ಲಿ ಅಂತ್ಯಸಂಸ್ಕಾರ ಮಾಡಲು ನಿರ್ಧರಿಸಿದ್ದರು. ಆದರೆ ಅಲ್ಲಿ ಕೂಡ ಸ್ಥಳೀಯರು ವಿರೋಧ ವ್ಯಕ್ತಪಡಿಸಿ ಅಧಿಕಾರಿಗಳು ಮುಂದೆ ಶವಾಗಾರಕ್ಕೆ ಹೋಗದಂತೆ ತಡೆದಿದ್ದರು.

ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಾರಿ, ಮೃತದೇಹವನ್ನು ಹಸ್ತಾಂತರಿಸಿದ ನಂತರ ಅಂತ್ಯಸಂಸ್ಕಾರಕ್ಕೆ ಶವಾಗಾರವನ್ನು ಆಯ್ಕೆ ಮಾಡುವುದು ಕಂದಾಯ ಇಲಾಖೆ ಮತ್ತು ಪೊಲೀಸರಿಗೆ ಬಿಟ್ಟ ವಿಚಾರ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com