ಕೋವಿಡ್-19 ಸಮರ: ಬೆಂಗಳೂರು ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ತರಬೇತಿ! 

ಕೋವಿಡ್-19 ಸಮರದಲ್ಲಿ ಮುಂಚೂಣಿಯಲ್ಲಿ ನಿಂತಿರುವ ಪೊಲೀಸ್ ಸಿಬ್ಬಂದಿಗಳು ಅತಿ ಹೆಚ್ಚಿನ ಒತ್ತಡ ಎದುರಿಸುತ್ತಿದ್ದಾರೆ. ಈ ಕೆಲಸಗಳಲ್ಲಿ ನಿರತರಾಗಿರುವವರಿಗೆ ಒತ್ತಡ ನಿರ್ವಹಣೆ ತರಬೇತಿ ನೀಡಲಾಗಿದೆ. 
ಕೋವಿಡ್-19 ಸಮರ: ಬೆಂಗಳೂರು ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ತರಬೇತಿ!
ಕೋವಿಡ್-19 ಸಮರ: ಬೆಂಗಳೂರು ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ತರಬೇತಿ!

ಬೆಂಗಳೂರು: ಕೋವಿಡ್-19 ಸಮರದಲ್ಲಿ ಮುಂಚೂಣಿಯಲ್ಲಿ ನಿಂತಿರುವ ಪೊಲೀಸ್ ಸಿಬ್ಬಂದಿಗಳು ಅತಿ ಹೆಚ್ಚಿನ ಒತ್ತಡ ಎದುರಿಸುತ್ತಿದ್ದಾರೆ. ಈ ಕೆಲಸಗಳಲ್ಲಿ ನಿರತರಾಗಿರುವವರಿಗೆ ಒತ್ತಡ ನಿರ್ವಹಣೆ ತರಬೇತಿ ನೀಡಲಾಗಿದೆ. 

ಏ.25 ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಆಯೋಜಿಸಲಾಗಿದ್ದ ಈ ತರಬೇತಿಯಲ್ಲಿ ಬೆಂಗಳೂರು ನಗರ ಪೊಲೀಸರು ಭಾಗಿಯಾಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ಟ್ವೀಟ್ ಮಾಡಿದ್ದಾರೆ. 

ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮಾನ್ಸ್) ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ಸ್ಟ್ರೆಸ್ ಥೆರೆಪಿಯನ್ನು ಆಯೋಜಿಸಿದ್ದರು, ಈ ಸಂಕಷ್ಟದ ಸಮಯದಲ್ಲಿ ಪೊಲೀಸ್ ಸಿಬ್ಬಂದಿಗಳಿಗೆ ಒತ್ತಡ, ಆತಂಕ ನಿರ್ವಹಣೆ ಮಾಡುವುದಕ್ಕೆ ಇದು ಸಹಕಾರಿಯಾಗಿದೆ ಎಂದು ಪೊಲೀಸ್ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com