ವಲಸೆ ಕಾರ್ಮಿಕರ ಪ್ರಯಾಣಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ವಿಜಯಭಾಸ್ಕರ್ ಸೂಚನೆ

ಎಲ್ಲ ವಲಸೆ ಕಾರ್ಮಿಕರು ಸ್ವಗ್ರಾಮಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ತೆರಳಲು ಅಥವಾ ನಿರ್ಮಾಣ ಕಾಮಗಾರಿಗಾಗಿ ನಗರಗಳಿಗೆ ಆಗಮಿಸಲು ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಿಜಯ್ ಭಾಸ್ಕರ್
ವಿಜಯ್ ಭಾಸ್ಕರ್

ಬೆಂಗಳೂರು: ಎಲ್ಲ ವಲಸೆ ಕಾರ್ಮಿಕರು ಸ್ವಗ್ರಾಮಗಳಿಗೆ ಕೃಷಿ ಚಟುವಟಿಕೆಗಳಿಗಾಗಿ ತೆರಳಲು ಅಥವಾ ನಿರ್ಮಾಣ ಕಾಮಗಾರಿಗಾಗಿ ನಗರಗಳಿಗೆ ಆಗಮಿಸಲು ಸೂಕ್ತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಎಲ್ಲ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಪರಿಸ್ಥಿತಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವಲಸೆ ಕಾರ್ಮಿಕರು ಮತ್ತು ಕೂಲಿ ಕಾರ್ಮಿಕರು ಸಿಕ್ಕಿ ಹಾಕಿಕೊಂಡಿದ್ದಾರೆ. ಅವರನ್ನು ಉದ್ದೇಶಿತ ಸ್ಥಳಕ್ಕೆ ತಲುಪಿಸಲು ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ಸುಗಳನ್ನು ಬಳಸಿಕೊಳ್ಳಲಿದ್ದು, ಲಾಕ್‌ಡೌನ್‌ನ ಸಾಮಾಜಿಕ ಅಂತರವನ್ನು ನಿರ್ವಹಿಸುವ ದೃಷ್ಟಿಯಿಂದ ಶೇಕಡ 40ರಷ್ಟು ಆಸನಗಳನ್ನು ಮಾತ್ರ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಎಲ್ಲ ವಲಸೆ ಮತ್ತು ದಿನಗೂಲಿ ಕಾರ್ಮಿಕರಿಗೆ ಈ ಪ್ರಯಾಣದ ವೇಳೆ ಮಾಸ್ಕ್ ಮತ್ತು ಕೈಗವಸುಗಳನ್ನು ಕಡ್ಡಾಯವಾಗಿ ಪೂರೈಸಬೇಕು ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಸೂಚಿಸಿದ್ದಾರೆ.

ವಲಸೆ ಕಾರ್ಮಿಕರು ರಾಜ್ಯದೊಳಗೆ ಸಂಚರಿಸಲು ಕೇಂದ್ರ ಸರ್ಕಾರ ನಿರ್ದಿಷ್ಟಪಡಿಸಿದ ನಿಗದಿತ ಕಾರ್ಯಾಚರಣೆ ವಿಧಿವಿಧಾನ (ಎಸ್‌ಓಪಿ)ಕ್ಕೆ ಅನುಗುಣವಾಗಿ ಪ್ರಯಾಣ ಸೌಕರ್ಯ ಕಲ್ಪಿಸಲಾಗುತ್ತದೆ. ಈಗ ಇರುವ ರಾಜ್ಯಗಳಿಗೆ ಸೀಮಿತವಾಗಿ ಕಾರ್ಮಿಕರ ಓಡಾಟಕ್ಕೆ ವ್ಯವಸ್ಥೆ ಮಾಡಲಾಗುವುದು. ಎಸ್‌ಓಪಿ ಅನ್ವಯ ಎಲ್ಲ ಕಾರ್ಮಿಕರನ್ನು ಪ್ರಯಾಣಕ್ಕೆ ಮುನ್ನ ಕೋವಿಡ್-19 ಸ್ಕ್ರೀನಿಂಗ್‌ಗೆ ಒಳಪಡಿಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com