ಬೆಂಗಳೂರು: ಸುದ್ದಿ ವಾಹಿನಿಯ ಕ್ಯಾಮೆರಾಮನ್ ಗೆ ಕೊರೋನಾ ಪಾಸಿಟಿವ್

ನಗರದ ಪತ್ರಕರ್ತರಿಗೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಸ್ಥಳೀಯ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಒಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ನಗರದ ಪತ್ರಕರ್ತರಿಗೂ ಮಹಾಮಾರಿ ಕೊರೋನಾ ವೈರಸ್ ವಕ್ಕರಿಸಿದ್ದು, ಸ್ಥಳೀಯ ಸುದ್ದಿ ವಾಹಿನಿಯ ಕ್ಯಾಮೆರಾಮನ್ ಒಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಶನಿವಾರ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ರಾಜ್ಯದಲ್ಲಿ ಹೊಸದಾಗಿ ಸುದ್ದಿ ವಾಹಿನಿಯ ಪತ್ರಕರ್ತ ಸೇರಿದಂತೆ 15 ಮಂದಿಗೆ ಕೊವಿಡ್-19 ಪಾಸಿಟಿವ್ ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.

ರಾಜ್ಯ ಆರೋಗ್ಯ ಇಲಾಖೆ ನಿನ್ನೆಯಿಂದ ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದವರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸುತ್ತಿದ್ದು, ಶುಕ್ರವಾರ ಒಟ್ಟು 120 ಮಂದಿಯನ್ನು ಪರೀಕ್ಷಿಸಲಾಗಿದೆ. ಈ ಪೈಕಿ ಸುದ್ದಿ ವಾಹಿನಿಯ ಓರ್ವ ಕ್ಯಾಮೆರಾಮನ್ ಗೆ ಪಾಸಿಟಿವ್ ಬಂದಿದ್ದು, ಉಳಿದ 119 ಮಂದಿಗೆ ನೆಗಟಿವ್ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಲ್ಲಾ ಪತ್ರಕರ್ತರನ್ನು ಕೊವಿಡ್-19 ಪರೀಕ್ಷೆಗೆ ಒಳಪಡಿಸುವಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಶುಕ್ರವಾರದಿಂದ ಮೂರು ದಿನಗಳ ಕಾಲ ಮಾಧ್ಯಮದವರನ್ನು ತಪಾಸಣೆಗೆ ಒಳಪಡಿಸುತ್ತಿದೆ.

ಪತ್ರಕರ್ತರು ಸ್ವಯಂ ಪ್ರೇರಿತರಾಗಿ ಕೊವಿಡ್-19 ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದು, ಇಂದು ಸಹ ಸುಮಾರು 200 ಪತ್ರಕರ್ತರನ್ನು ಪರೀಕ್ಷಿಸಲಾಗಿದೆ ಎಂದು ವಾರ್ತಾ ಇಲಾಖೆ ಜಂಟಿ ಕಾರ್ಯದರ್ಶಿ ಡಿಪಿ ಮುರಳೀಧರ್ ಅವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com