ಕೋವಿಡ್-19: ಮೃತದೇಹದಿಂದ ಕೊರೋನಾ ಸೋಂಕಿಗೆ ಒಳಗಾಗುವ ಸಾಧ್ಯತೆ ಇಲ್ಲ; ದ.ಕ. ಜಿಲ್ಲಾಧಿಕಾರಿ ಸ್ಪಷ್ಟನೆ

ಕೊರೋನಾ ವೈರಸ್‌ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮಂಗಳೂರು: ಕೊರೋನಾ ವೈರಸ್‌ ಸೋಂಕಿತ 75 ವರ್ಷದ ಮಹಿಳೆ ಮೃತದೇಹದ ಅಂತ್ಯಕ್ರಿಯೆ ವಿರುದ್ಧ ಸ್ಥಳೀಯರು ನಡೆಸಿದ ಪ್ರತಿಭಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ ಶುಕ್ರವಾರ ಸ್ಪಷ್ಟನೆ ನೀಡಿ, ಮೃತದೇಹದಿಂದ ಯಾರೊಬ್ಬರಿಗೂ ಸೋಂಕು ತಗುಲುವ ಸಾಧ್ಯತೆ ಇಲ್ಲ ಎಂದು ಹೇಳಿದ್ದಾರೆ. 

ಕೋವಿಡ್ -19 ರೋಗಿಗಳ ಮೃತದೇಹಗಳ ಅಂತ್ಯಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರವು ಸೂಚಿಸಿರುವ ಶಿಷ್ಟಾಚಾರಗಳನ್ನು ಅನುಸರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊವಿಡ್‍-19ನಿಂದ ಸಾವನ್ನಪ್ಪಿದವರನ್ನು ಅವರವರ ಧಾರ್ಮಿಕ ಪದ್ಧತಿಗಳಂತೆ ಸಮಾಧಿ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಅಂತಿಮ ವಿಧಿ-ವಿಧಾನಗಳನ್ನು ನಡೆಸಲು 20 ಕ್ಕಿಂತ ಹೆಚ್ಚು ಜನರಿಗೆ ಅವಕಾಶ ನೀಡಲಾಗುವುದಿಲ್ಲ. ಮೃತ ವ್ಯಕ್ತಿಯ ಹತ್ತಿರದ ಸಂಬಂಧಿಗಳಿಗೆ ಸಹ ದೇಹವನ್ನು ಸ್ಪರ್ಶಿಸಲು ಇಲ್ಲವೇ ಮೃತದೇಹದ ಸ್ನಾನಕ್ಕೆ ಅನುಮತಿಸುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com