ಸಾಮಾಜಿಕ ಜಾಲತಾಣದ ಅಕೌಂಟಿಗಿಂತ ದೇಶ, ಸಿದ್ಧಾಂತವೇ ಮುಖ್ಯ: ಅನಂತ್ ಕುಮಾರ್ ಹೆಗಡೆ

ಟ್ವಿಟ್ಟರ್ ನಡೆಸುತ್ತಿರುವ ಭಾರತ ವಿರೋಧ ಪ್ರಚಾರಗಳನ್ನು ತಾವು ಅತ್ಯಂತ ತೀವ್ರವಾಗಿ ಖಂಡಿಸುತ್ತಿದ್ದು, ದೇಶ ವಿರೋಧಿ ಸಾಮಾಜಿಕ ಜಾಲತಾಣದ ಅಕೌಂಟಿಗಿಂತ ತಮಗೆ ತಮ್ಮ ದೇಶ, ತಮ್ಮ ಸಿದ್ಧಾಂತವೇ ಬದುಕಿನ ಆದ್ಯತೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸ್ಪಷ್ಟಪಡಿಸಿದ್ದಾರೆ.
ಸಂಸದ ಅನಂತ್ ಕುಮಾರ್ ಹೆಗಡೆ
ಸಂಸದ ಅನಂತ್ ಕುಮಾರ್ ಹೆಗಡೆ

ಬೆಂಗಳೂರು: ಟ್ವಿಟ್ಟರ್ ನಡೆಸುತ್ತಿರುವ ಭಾರತ ವಿರೋಧ ಪ್ರಚಾರಗಳನ್ನು ತಾವು ಅತ್ಯಂತ ತೀವ್ರವಾಗಿ ಖಂಡಿಸುತ್ತಿದ್ದು, ದೇಶ ವಿರೋಧಿ ಸಾಮಾಜಿಕ ಜಾಲತಾಣದ ಅಕೌಂಟಿಗಿಂತ ತಮಗೆ ತಮ್ಮ ದೇಶ, ತಮ್ಮ ಸಿದ್ಧಾಂತವೇ ಬದುಕಿನ ಆದ್ಯತೆ ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಸ್ಪಷ್ಟಪಡಿಸಿದ್ದಾರೆ.

ಭಾರತದ ವಿರುದ್ಧ ಷಡ್ಯಂತರ ಹಾಗೂ ಭಾರತವನ್ನು ಒಡೆಯುವ ಟ್ವೀಟ್‌ಗಳನ್ನು ಪ್ರಚಾರಮಾಡುವ ಉದ್ಯಮವನ್ನು ಟ್ವಿಟ್ಟರ್ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಕೆಲವು ದಿನಗಳ ಹಿಂದೆ ಗುರುಪಟವಂತ ಸಿಂಘ್ ಪನ್ನೂನ್ ಎಂಬ ಟ್ವಿಟ್ಟರ್ ಖಾತೆಯಿಂದ ಪಂಜಾಬ್ ರಾಜ್ಯವನ್ನು ಭಾರತದಿಂದ ಸ್ವಾತಂತ್ರಗೊಳಿಸಿ ಖಲಿಸ್ಥಾನ ಎಂಬ ಪ್ರತ್ಯೇಕ ರಾಷ್ಟ್ರವನ್ನಾಗಿಸುವುದರ ಬಗ್ಗೆ ಟ್ವೀಟ್ ಮಾಡಿದ್ದು ಅದನ್ನು ಟ್ವಿಟ್ಟರಿಗೆ ಹಣಪಾವತಿಸಿ ಜಾಹೀರಾತು ನೀಡಿದ್ದಾರೆ. ಇದು ಭಾರತದ ವಿರುದ್ಧ ನಡೆಸುತ್ತಿರುವ ಜಾಹೀರಾತಾಗಿದ್ದು ಇದನ್ನು ಟ್ವಿಟ್ಟರ್ ಅನುಮೋದಿಸಿ ಜಾಹೀರಾತನ್ನು ಪ್ರಚುರ ಪಡೆಸಿದೆ. ಇಂತಹ ರಾಷ್ಟ್ರವಿರೋಧ ಚಟುವಟಿಕೆಯನ್ನು ತಾವು ಬಯಲು ಮಾಡಿ, ಪ್ರಧಾನಿ ಹಾಗೂ ಗೃಹ ಸಚಿವರ ಗಮನಕ್ಕೆ ತಂದಿದ್ದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com