ರಾಜ್ಯದಲ್ಲಿ ಇಂದು ಮೂವರಿಗೆ ಕೋವಿಡ್-19 ಸೋಂಕು! ಒಟ್ಟು ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆ

ರಾಜ್ಯದಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಕೇವಲ 3ಕ್ಕೆ ಇಳಿದಿದ್ದು, ಜನತೆಯಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ
ಕೋವಿಡ್-19 ರೋಗಿಗಳು
ಕೋವಿಡ್-19 ರೋಗಿಗಳು

ಬೆಂಗಳೂರು: ರಾಜ್ಯದಲ್ಲಿ ಏರುಗತಿಯಲ್ಲಿ ಸಾಗುತ್ತಿದ್ದ ಕೋವಿಡ್-19 ಸೋಂಕಿತರ ಸಂಖ್ಯೆ ಇಂದು ಕೇವಲ 3ಕ್ಕೆ ಇಳಿದಿದ್ದು, ಜನತೆಯಲ್ಲಿ ಸ್ವಲ್ಪ ಮಟ್ಟಿನ ಸಮಾಧಾನ ಮೂಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  1 ಹಾಗೂ ಕಲಬುರಗಿಯಲ್ಲಿ ಎರಡು ಪ್ರಕರಣ ವರದಿಯಾಗುವುದರೊಂದಿಗೆ ಒಟ್ಟಾರೇ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ. 

 19 ಜನರು ಕೋವಿಡ್-19 ಸೋಂಕಿನಿಂದ ಮೃತಪಟ್ಟಿದ್ದು, 182 ಜನ ಆಸ್ಪತ್ರೆಗಳಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಾಣೆ ಮಂಗಳೂರಿನ  47 ವರ್ಷದ ಮಹಿಳೆ ಹಾಗೂ ಕಲಬುರಗಿಯ 65 ವರ್ಷದ ಮಹಿಳೆ ಹಾಗೂ 7 ವರ್ಷದ ಬಾಲಕನೊಬ್ಬನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇವರನ್ನು ನಿಗದಿತ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನೂ ರಾಜ್ಯದ ಹಾಟ್ ಸ್ಟಾಟ್ ಜಿಲ್ಲೆಗಳಾದ ಬೆಂಗಳೂರು, ಮೈಸೂರು, ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತಿತರ ಜಿಲ್ಲೆಗಳಲ್ಲಿ ಇಂದು ಒಂದೇ ಒಂದು ಪ್ರಕರಣವೂ ಕಂಡುಬಂದಿಲ್ಲ.ಇದು ಆಶಾದಾಯಕ ಬೆಳವಣಿಗೆಯಾಗಿದೆ. ಈ ತಿಂಗಳಲ್ಲಿ ಅತಿ ಕಡಿಮೆ ಕೊರೋನಾ ವೈರಸ್ ಪ್ರಕರಣ  ವರದಿಯಾಗುವ ಮೂಲಕ ಜನತೆಯಲ್ಲಿ ಸ್ವಲ್ಪ ಮಟ್ಟಿನ ನಿಟ್ಟುಸಿರು ಬಿಡುವಂತೆ ಮಾಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com