ಕುಬೇರ ಉದ್ಯೋಗಪತಿಗಳಿಂದ ಸರ್ಕಾರ ಕೊರೋನ ತೆರಿಗೆ ಸಂಗ್ರಹಿಸಲಿ: ಎಚ್‌ಡಿಕೆ

ಲಾಕ್ ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಎಚ್‌ಡಿ ಕುಮಾರಸ್ವಾಮಿ
ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಲಾಕ್ ಡೌನ್ ತೆಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.

ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತೆಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ. ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರಿಂದ ಕುಬೇರ ಉದ್ಯೋಗಪತಿಗಳಿಂದ ಕೊರೋನ ತೆರಿಗೆಯನ್ನು ಸಂಗ್ರಹಿಸಲಿ ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ರಿಸರ್ವ್ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ ಎಂದು ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

ಕುಮಾರಸ್ವಾಮಿಯವರು ಟ್ವೀಟ್ ಮೂಲಕ ಸರ್ಕಾರಕ್ಕೆ ನೀಡಿರುವ ಸಲಹೆಗಳು ಈ ಮುಂದಿನಂತಿದೆ-

"ರೈತರು ಮತ್ತು ಅಸಂಘಟಿತ ವಲಯದ ಕಾರ್ಮಿಕರ ಜೀವನೋಪಾಯಗಳ ರಕ್ಷಣೆ ಮಾಡುವುದು ತುರ್ತಿನ ಆದ್ಯತೆಯಾಗಿದೆ. ಟ್ಯಾಕ್ಸಿ ಮತ್ತು ಆಟೋ ಚಾಲಕರು, ಗಾರ್ಮೆಂಟ್ ಕೆಲಸಗಾರರು, ಕಟ್ಟಡ ಕಾರ್ಮಿಕರು ಇತ್ಯಾದಿ ನಗರ ಪ್ರದೇಶದ ಬಡ ಸಮುದಾಯಕ್ಕೋಸ್ಕರ ಸರಕಾರ ಹೆಚ್ಚಿನ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ.

"ಅನೇಕ ಖಾಸಗಿ ಕಂಪನಿಗಳು ಈಗಾಗಲೇ ಸಿಬ್ಬಂದಿ ಕಡಿತ ಮತ್ತು ಸಂಬಳ ಕಡಿತ ಮಾಡುವ ತೀರ್ಮಾನ ತಗೆದುಕೊಂಡಿವೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನೂ ಬಿಗಡಾಯಿಸಲಿದೆ ಹೀಗಾಗಿ ಸರಕಾರ ಜನಕಲ್ಯಾಣ ಯೋಜನೆಗಳ ಮೇಲೆ ಹೆಚ್ಚು ಖರ್ಚು ಮಾಡಬೇಕಾಗುವುದರರಿಂದ ಕುಬೇರ ಉದ್ಯೋಗಪತಿಗಳಿಂದ ಕರೋನ ತೆರಿಗೆಯನ್ನು ಸಂಗ್ರಹಿಸಲಿ.

"ಈ ಹಠಾತ್ ಶಾಕ್ ನಿಂದ ಜನಸಾಮಾನ್ಯರು ಸುಧಾರಿಸಿಕೊಳ್ಳಲು ಅನುವಾಗುವಂತೆ ಬಾಡಿಗೆ ಮುಂದೂಡಿಕೆ ಬದಲಾಗಿ ಭಾಗಶಃ ಬಾಡಿಗೆ ವಿನಾಯಿತಿ, ಖಾಸಗಿ ಸ್ಕೂಲು/ಕಾಲೇಜುಗಳ ಫೀಸ್ ಕಡಿತ, ವಿದ್ಯುತ್ ಬಿಲ್ ಕಡಿತ, ಪೆಟ್ರೋಲ್/ಡೀಸೆಲ್ ದರ ಕಡಿತ ಘೋಷಣೆ ಮಾಡುವುದು ಸೂಕ್ತ. ಲಾಕ್ ಡೌನ್ ತಗೆದ ತಕ್ಷಣವೇ ಆರ್ಥಿಕ ಸ್ಥಿತಿ ಯಥಾಸ್ಥಿತಿಗೆ ಮರಳಲಾರದು. ಜಿಡಿಪಿ ಬೆಳವಣಿಗೆ ಈ ಹಿಂದೆ ಇದ್ದ ಸ್ಥಿತಿಗೆ ಮರಳಲು ವರ್ಷಗಳೇ ಬೇಕಾಗಬಹುದು.

"ರಿಸರ್ವ ಬ್ಯಾಂಕ್ ಒಳಗೊಂಡಂತೆ ಅನೇಕ ಸಂಸ್ಥೆಗಳು ಭಾರತದ ಜಿಡಿಪಿ ಬೆಳವಣಿಗೆ ತೀವ್ರ ಕುಸಿತಕ್ಕೆ ಇಳಿಯುವ ಮುನ್ಸೂಚನೆ ಕೊಟ್ಟಿರುವಾಗ ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯನ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯಗಳನ್ನು ಹುಡುಕಬೇಕಾಗುತ್ತದೆ. ಮುಂಬರುವ ದಿನಗಳಲ್ಲಿ 'ಕಾಸ್ಟ್ ಆಫ್ ಲಿವಿಂಗ್' ಕಡಿಮೆ ಮಾಡುವುದು ಸರಕಾರಗಳ ಆದ್ಯತೆ ಆಗಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com