
ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ.
ಅಳಂದದ ನಿವಾಸಿಯಾಗಿದ್ದ 57 ವರ್ಷದ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ GIMSಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದು ಮೃತಪಟ್ಟಿದ್ದಾರೆ.
ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಕೊರೋನಾಗೆ ಒಟ್ಟು ಐವರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಇಂದು ಹೊಸದಾಗಿ ಒಂಬತ್ತು ಕೊರೋನಾವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ. ಇನ್ನು 20 ಮಂದಿ ಮೃತಪಟ್ಟಿದ್ದು, 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.
Advertisement