ತುಮಕೂರು: ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ದಂಡ, ತುಮಕೂರಿನಲ್ಲಿ ಇಂದು ಸಂಗ್ರಹವಾದ ಮೊತ್ತ ಎಷ್ಟು ಗೊತ್ತಾ?

ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಸೋಂಕು ಪ್ರಸರಣ ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ್ದು, ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ದಂಡ ಹಾಕಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಕೊರೋನಾ ವೈರಸ್ ಲಾಕ್ ಡೌನ್ ಹಿನ್ನಲೆಯಲ್ಲಿ ಸೋಂಕು ಪ್ರಸರಣ ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿದ್ದು, ಮಾಸ್ಕ್ ಧರಿಸದೇ ಓಡಾಡುತ್ತಿದ್ದವರಿಗೆ ದಂಡ ಹಾಕಲಾಗಿದೆ.

ಕೊರೊನಾ ವೈರಸ್‌ ನಿಯಂತ್ರಿಸಲು ದೇಶಾದ್ಯಂತ ರಾಜ್ಯ ಸರ್ಕಾರಗಳು ತಮ್ಮದೇ ಆದ ಕಾರ್ಯತಂತ್ರಗಳನ್ನು ಅಳವಡಿಸಿಕೊಂಡಿವೆ. ಅದರಂತೆ ಕರ್ನಾಟಕದಲ್ಲೂ ಪ್ರತಿಯೊಬ್ಬರು ಫೇಸ್‌ ಮಾಸ್ಕ್‌ ಹಾಕಿಕೊಳ್ಳುವುದನ್ನು ಕಡ್ಡಾಯ ಮಾಡಿದೆ. ಒಂದು ವೇಳೆ ಧರಿಸದೆ ಇದ್ದಲ್ಲಿ 100 ರೂ. ದಂಡ  ಪಾವತಿಸಬೇಕಾಗುತ್ತದೆ ಎಂದು ತುಮಕೂರು ಜಿಲ್ಲಾಡಳಿತ ಈ ಹಿಂದೆ ಎಚ್ಚರಿಕೆ ನೀಡಿತ್ತು.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ಸರ್ಕಾರದ ಸೂಚನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು 100 ರೂ.ಗಳ ದಂಡ ಕಟ್ಟಬೇಕಾಗುತ್ತದೆ. ಒಂದು ವೇಳೆ ಪಾವತಿಸದಿದ್ದಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 ರ ಅಡಿಯಲ್ಲಿಆ ವ್ಯಕ್ತಿಯು ವಿರುದ್ಧ ಕಾನೂನ ಕ್ರಮ  ಜರುಗಿಸಲಾಗುವುದು ಎಂದು ಹೇಳಿತ್ತು. ಅದರಂತೆ ಇಂದು ರಾಜ್ಯದಲ್ಲೇ ಪ್ರಥಮ ಬಾರಿಗೆ ತುಮಕೂರಿನಲ್ಲಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದವರ ವಿರುದ್ಧ ಪೊಲೀಸರು ದಂಡ ಹಾಕಿದ್ದಾರೆ.  

ಸಾಂಕ್ರಾಮಿಕ ರೋಗ ಕಾಯ್ದೆಯಡಿ ಇಂದು ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಇಂದು ತುಮಕೂರಿನಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಒಟ್ಟು 10, 100 ರೂ ದಂಡ ಹಾಕಿದ್ದಾರೆ. ಅಂಗಡಿ ಮಾಲಕಿ ಅಕ್ಷತಾ ಎಂಬುವವರಿಗೆ ಅಧಿಕಾರಿಗಳು ಮಾಸ್ಕ್ ಧರಿಸದೇ ಇರುವ  ಹಿನ್ನಲೆ ಮತ್ತು ಅಂಗಡಿಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಹಿನ್ನಲೆಯಲ್ಲಿ 4600 ರೂ ದಂಡ ವಿಧಿಸಿದ್ದಾರೆ. ಅಂತೆಯೇ ಶಿವಾನಂದ ಬುದಿಯಾಳ್, ದರ್ಶನ್ ಮತ್ತು ಕೆಎನ್ ಧರ್ಮೇಂದ್ರ ಎಂಬುವವರಿಗೆ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದ ಹಿನ್ನಲೆಯಲ್ಲಿ 1800ರೂ ಮತ್ತು 1900  ರೂ ಮತ್ತು 1 ಸಾವಿರ ರೂ ದಂಡ ವಿಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com