ರೌಡಿಶೀಟರ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಮತ್ತೋರ್ವನಿಗಾಗಿ ಪೊಲೀಸರ ಹುಡುಕಾಟ

ರೌಡಿಶೀಟರ್'ನನ್ನು ಅಪಹರಿಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

Published: 28th April 2020 11:20 AM  |   Last Updated: 28th April 2020 11:20 AM   |  A+A-


File photo

ಸಂಗ್ರಹ ಚಿತ್ರ

Posted By : Manjula VN
Source : The New Indian Express

ಬೆಂಗಳೂರು: ರೌಡಿಶೀಟರ್'ನನ್ನು ಅಪಹರಿಸಿ, ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಲದೇವನಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಸೋಮವಾರ ಬಂಧನಕ್ಕೊಳಪಡಿಸಿದ್ದಾರೆ. 

ಏಪ್ರಿಲ್ 21 ರಂದು ಪ್ರಕಾಶ್ ಎಂಬ ರೌಡಿಶೀಟರ್'ನನ್ನು ಮೂವರು ಆರೋಪಿಗಳು ಅಪಹರಿಸಿ, ಕೊಲೆ ಮಾಡಿದ್ದರು. ಬಳಿಕ ಪ್ರಕಾಶ್ ಮೃತದೇಹ ಮತ್ಕುರ್ ಎಂಬ ಗ್ರಾಮದಲ್ಲಿ ಪತ್ತೆಯಾಗಿತ್ತು. 

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಆರಂಭಿಸಿದ್ದರು. ಇದರಂತೆ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸುವಲ್ಲಿ ಯಶಸ್ವಿಯಾಗಿದ್ದು, ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ. 

ಹತ್ಯೆಯಾದ ಪ್ರಕಾಶ್ ಜೂಜಾಡುತ್ತಿದ್ದ ಸಂದರ್ಭದಲ್ಲಿ ಮೋಸ ಮಾಡಿ, ಪ್ರತೀಯೊಬ್ಬ ಬಳಿ ಮದ್ಯ ಕೇಳುತ್ತಿದ್ದ. ಅಲ್ಲದೆ, ಕೆಟ್ಟ ಭಾಷೆಯಲ್ಲಿ ನಿಂದಿಸುತ್ತಿದ್ದನೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೋಪಗೊಂಡು ಆತನನ್ನು ಹತ್ಯ ಮಾಡಿರುವುದಾಗಿ ಆರೋಪಿಗಳು ಹೇಳಿಕೊಂಡಿದ್ದಾರೆ. 

Stay up to date on all the latest ರಾಜ್ಯ news
Poll
Farmers

ಕೇಂದ್ರ ಸರ್ಕರದ ಕೃಷಿ ಸುಧಾರಣಾ ಮಸೂದೆಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯೇ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp