ಮುನಿರತ್ನ ವಿರುದ್ದ ನಕಲಿ ಗುರುತಿನ ಚೀಟಿ ಪ್ರಕರಣ; ಅರ್ಜಿ ವಜಾಗೊಳಿಸಲು ಹೈಕೋರ್ಟ್ ನಕಾರ

ನಕಲಿ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ತಕರಾರು ಅರ್ಜಿಯನ್ನು ವಿಚಾರಣೆಯಿಂದ ಕೈಬಿಡಬೇಕು ಎಂಬ ಮುನಿರತ್ನ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಮುನಿರತ್ನ-ಕರ್ನಾಟಕ ಹೈಕೋರ್ಟ್
ಮುನಿರತ್ನ-ಕರ್ನಾಟಕ ಹೈಕೋರ್ಟ್

ಬೆಂಗಳೂರು: ನಕಲಿ ಮತದಾರರ ಗುರುತಿನ ಚೀಟಿಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ತಕರಾರು ಅರ್ಜಿಯನ್ನು ವಿಚಾರಣೆಯಿಂದ ಕೈಬಿಡಬೇಕು ಎಂಬ ಮುನಿರತ್ನ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

ಅರ್ಜಿದಾರರು ಮತ್ತು ಪ್ರತಿವಾದಿಗಳ ಮಧ್ಯಂತರ ಅರ್ಜಿಗಳ ಮೇಲೆ ಕಾಯ್ದಿರಿಸಿದ ಆದೇಶವನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ಪೀಠ ಮಂಗಳವಾರ ಪ್ರಕಟಿಸಿತು. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್  ಅಭ್ಯರ್ಥಿಯಾಗಿ ಮುನಿರತ್ನ ಗೆದ್ದಿದ್ದರು. ಇವರ ವಿರುದ್ಧ ಪರಾಜಯ ಅನುಭವಿಸಿದ ಅಂದಿನ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ಕುರಿತಂತೆ ಹೈಕೋರ್ಟ್ ಈ ಮಧ್ಯಂತರ ಆದೇಶ ನೀಡಿದೆ.

ಕ್ರಿಮಿನಲ್ ಪ್ರಕರಣದಲ್ಲಿ ನನ್ನದೇನೂ ಪಾತ್ರವಿಲ್ಲ, ಆದ್ದರಿಂದ, ಪರಾಜಿತ ಅಭ್ಯರ್ಥಿ ಮುನಿರಾಜು ಗೌಡ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ಆರೋಪದಿಂದ ನನ್ನನ್ನು ಕೈ ಬಿಡಬೇಕು ಎಂದು ಮುನಿರತ್ನ ಮನವಿ ಮಾಡಿದ್ದರು. ಆದರೆ, ಮುನಿರತ್ನ ಅವರ ಅರ್ಜಿಯನ್ನ ನ್ಯಾಯಮೂರ್ತಿ  ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯ ತಿರಸ್ಕರಿಸಿದೆ. ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ 2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುನಿರತ್ನ ಗೆದ್ದಿದ್ದರು. ಇವರ ವಿರುದ್ಧ ಪರಾಜಯ ಅನುಭವಿಸಿದ ಅಂದಿನ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ,  ತಕರಾರು ಅರ್ಜಿಯನ್ನು ಸಲ್ಲಿಸಿದ್ದರು.

ಇನ್ನು ಮುನಿರಾಜು ಗೌಡ ಅವರು ತಮ್ಮ ಚುನಾವಣಾ ತಕರಾರು ಅರ್ಜಿಯ ವಾದ ಪತ್ರದ ತಿದ್ದುಪಡಿಗೆ ಕೋರಿದ್ದ ಮಧ್ಯಂತರ ಅರ್ಜಿ ಮತ್ತು ಹಲವು ಹೊಸ ದಾಖಲೆಗಳನ್ನು ಸಲ್ಲಿಸಲು ಅವಕಾಶ ನೀಡುವಂತೆ ಕೋರಿದ್ದ ಮನವಿಯನ್ನು ನ್ಯಾಯಪೀಠ ಇದೇ ವೇಳೆ ಪುರಸ್ಕರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com