ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಸರ್ಕಾರಕ್ಕೂ ತಟ್ಟಿದ ಸೋಂಕು ಭೀತಿ: ಐವರು ಸಚಿವರು ಸಂಪುಟಕ್ಕೆ ಹಾಜರಾಗದಂತೆ ಸೂಚನೆ

ಕೊರೋನಾ ಸೋಂಕಿನ ಭೀತಿ ಇದೀಗ ರಾಜ್ಯ ಸರ್ಕಾರಕ್ಕೂ ತಟ್ಟಿದೆ. ಕೊರೋನಾ ಸೋಂಕಿತರು ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಐವರು ಸಚಿವರು ಇಂದಿನ ಸಂಪುಟ ಸಭೆಗೆ ಗೈರಾಗಲಿದ್ದಾರೆ. 

ಬೆಂಗಳೂರು: ಕೊರೋನಾ ಸೋಂಕಿನ ಭೀತಿ ಇದೀಗ ರಾಜ್ಯ ಸರ್ಕಾರಕ್ಕೂ ತಟ್ಟಿದೆ. ಕೊರೋನಾ ಸೋಂಕಿತರು ಸಂಪರ್ಕಕ್ಕೆ ಬಂದ ಹಿನ್ನೆಲೆಯಲ್ಲಿ ಐವರು ಸಚಿವರು ಇಂದಿನ ಸಂಪುಟ ಸಭೆಗೆ ಗೈರಾಗಲಿದ್ದಾರೆ. 

ಐವರು ಸಚಿವರು ಸಭೆಗೆ ಬಾರದಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಸಚಿವರಾದ ಸುಧಾಕರ್, ಡಾ.ಅಶ್ವತ್ಥನಾರಾಯಣ, ಸಿ.ಟಿ.ರವಿ. ಬಸವರಾಜ ಬೊಮ್ಮಾಯಿ, ವಿ.ಸೋಮಣ್ಣ ಅವರಿಗೆ ಸಂಪುಟಕ್ಕೆ ಬರದಂತೆ ಸೂಚನೆ ನೀಡಲಾಗಿದೆ ಎಂದು ವರದಿಗಳು ತಿಳಿಸಿವೆ. 

ಸ್ವಯಂ‌ ಕ್ವಾರಂಟೈನ್ ಗೊಳಗಾದ ಸಚಿವ ಸುಧಾಕರ್
ಮಹಾಮಾರಿ ಕೊರೊನಾ ಸೋಂಕಿಗೆ ಸಚಿವರೂ ಆತಂಕ್ಕೀಡಾಗಿದ್ದು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯ ಕ್ಯಾಮೆರಾಮೆನ್​ಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅವರಿಗೆ ಸಚಿವರು ಬೈಟ್ ನೀಡಿದ್ದ ಹಿನ್ನೆಲೆಯಲ್ಲಿ ಸದ್ಯ ಅವರು 7 ದಿನಗಳ ಕಾಲ ಸ್ವಯಂ ಕ್ವಾರಂಟೈನ್​ಗೆ ಒಳಪಟ್ಟಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಚಿವರು, ‘ಕೋವಿಡ್-19 ಪಾಸಿಟಿವ್ ಬಂದಿರುವ ಪತ್ರಕರ್ತ ನನ್ನ ಸಂಪರ್ಕಕ್ಕೆ ಬಂದಿರುವುದು ತಿಳಿಯುತ್ತಿದ್ದಂತೆ, ಪರೀಕ್ಷೆ ಮಾಡಿಸಿಕೊಂಡಿದ್ದು, ರಿಸಲ್ಟ್ ನೆಗೆಟಿವ್ ಬಂದಿದೆ. ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ 7 ದಿನಗಳ ಕಾಲ ನಾನು ಮನೆಯಲ್ಲಿರಲು ನಿರ್ಧರಿಸಿದ್ದೇನೆ. ಅಲ್ಲಿಂದಲೇ ಕರ್ತವ್ಯ ನಿರ್ವಹಿಸುತ್ತೇನೆ‘ ಎಂದು ಅವರು ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com