ರೋಗಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಆ್ಯಂಬುಲೆನ್ಸ್ ಸಿಬ್ಬಂದಿಗಳ ಜವಾಬ್ದಾರಿ: ಬಿಬಿಎಂಪಿ

ಕೊರೋನಾ ಸೋಂಕು ತಗುಲಿರುವ ಹಾಗೂ ತಗುಲಿರದ ರೋಗಿಗಳು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಖಚಿತಪಡಿಸಿಕೊಳ್ಳುವುದು ಆ್ಯಂಬುಲೆನ್ಸ್ ಸಿಬ್ಬಂದಿಗಳ ಕರ್ತವ್ಯ ಎಂದು ಬಿಬಿಎಂಪಿ ಶುಕ್ರವಾರ ಹೇಳಿದೆ. 
108 ಅಂಬುಲೆನ್ಸ್
108 ಅಂಬುಲೆನ್ಸ್

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಹಾಗೂ ತಗುಲಿರದ ರೋಗಿಗಳು ಆಸ್ಪತ್ರೆಗೆ ದಾಖಲಾಗಿರುವ ಕುರಿತು ಖಚಿತಪಡಿಸಿಕೊಳ್ಳುವುದು ಆ್ಯಂಬುಲೆನ್ಸ್ ಸಿಬ್ಬಂದಿಗಳ ಕರ್ತವ್ಯ ಎಂದು ಬಿಬಿಎಂಪಿ ಶುಕ್ರವಾರ ಹೇಳಿದೆ. 

ಈ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಸುತ್ತೋಲೆಯನ್ನು ಹೊರಡಿಸಿದ್ದಾರೆ. ರೋಗಿಗಳಿಗೆ ಮಾನಸಿಕ ಬೆಂಬಲದ ಅಗತ್ಯವಿರುತ್ತದೆ. 108 ಸಿಬ್ಬಂದಿಗಳಿಗೆ ಕೋವಿಡ್ ಕೇರ್ ಸೆಂಟರ್ ಮತ್ತು ಕೋವಿಡ್ ಆಸ್ಪತ್ರೆಗಳ ಹಾಸಿಗೆ ನಿರ್ವಹಣಾ ವ್ಯವಸ್ಥೆಯಿಂದ ಹಾಸಿಗೆಗಳ ಲಭ್ಯವಿರುವ ಕುರಿತು ಮಾಹಿತಿ ದೊರೆಯುವಂತೆ ಮಾಡಲಾಗುತ್ತದೆ. ಇದರಿಂದ ರೋಗಿಯ ಹೆಸರು ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ಸಿಬ್ಬಂದಿಯು ಐಸಿಯು ಮತ್ತು ಐಸಿಯು-ವಿ ಐಸೊಲೇಷನ್ ವಾರ್ಡ್ ಹಾಸಿಗೆಗಳನ್ನು ದೊರಕಿಸಿಕೊಡಲು ಸಹಾಯ ಮಾಡುತ್ತದೆ. ಕೊರೋನಾ ಆಸ್ಪತ್ರೆ ಹಾಸಿಕೆ ನಿರ್ವಹಣಾ ವ್ಯವಸ್ಥೆ ಅಡಿಯಲ್ಲಿ ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಹಾಸಿಗೆ ನೀಡಬೇಕು. ಹಾಸಿಗೆಗಳ ಮಾಹಿತಿಯನ್ನು ಆಸ್ಪತ್ರೆಗಳು ಪೋರ್ಟಲ್ ನಲ್ಲಿ ತಪ್ಪದೇ ಹಾಕಬೇಕು ಎಂದು ತಿಳಿಸಿದ್ದಾರೆ. 

ಸಾರಿ ರೋಗಲಕ್ಷಣದಿಂದ ಬಳಲುತ್ತಿದ್ದು, ಪರೀಕ್ಷೆ ಮಾಡಿಸಿಕೊಳ್ಳದ ಜನರನ್ನು 108 ಸಿಬ್ಬಂದಿಗಳು ಕೋವಿಡ್ ಶಂಕಿತರ ಪ್ರತ್ಯೇಕ ಆಸ್ಪತ್ರೆಗಳಿಗೆ ದಾಖಲಿಸುತ್ತಾರೆ. ರೋಗಿಗಳು ಕೇವಲ ಎಸ್ಎಫ್ಆರ್ ನಂಬರ್ ಹೊಂದಿದ್ದರೆ ಸಾಕು, ಕೋವಿಡ್ ಕೇರ್ ಕೇಂದ್ರದಲ್ಲಿ ದಾಖಲು ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com