ಹಾಸಿಗೆ ನೀಡಲು ನಕಾರ: ನಾಲ್ಕಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿ

ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿರಿಸಲು ನಿರ್ಲಕ್ಷ್ಯ ವಹಿಸಿರುವ ನಗರದ 4ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಕೊಳ್ಳುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೊರೋನಾ ಸೋಂಕಿತರಿಗೆ ಹಾಸಿಗೆ ಮೀಸಲಿರಿಸಲು ನಿರ್ಲಕ್ಷ್ಯ ವಹಿಸಿರುವ ನಗರದ 4ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಕೊಳ್ಳುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ಆದೇಶಿಸಿದ್ದಾರೆ. 

ನೃಪತುಂಗ ರಸ್ತೆಯ ಸೇಂಟ್ ಮಾರ್ಥಾಸ್ ಆಸ್ಪತ್ರೆ, ಶಂಕರಪುರದ ರಂಗದೊರೈ ಮೊಮೋರಿಯಲ್ ಆಸ್ಪತ್ರೆ, ಕ್ವೀನ್ಸ್ ರಸ್ತೆಯ ಶಿಫಾ ಆಸ್ಪತ್ರೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆಯ ಫೋರ್ಟಿಸ್ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ. 

ರಾಜ್ಯದಲ್ಲಿರುವ 4-5 ಆಸ್ಪತ್ರೆಗಳು ತಮ್ಮ ಇಡೀ ಆಸ್ಪತ್ರೆಯನ್ನು ಕೊರೋನಾಗೆ ಮೀಸಲಿಡಲು ನಿರ್ಧರಿಸಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ಇತರೆ ಆಸ್ಪತ್ರೆಗಳಿಗೆ ಸ್ಥಳಾಂತರಿಸುತ್ತಿದ್ದಾರೆ. ವಿಕ್ರಮ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಆಸ್ಪತ್ರೆಯಲ್ಲಿ ಸೋಂಕಿತರಿಗೆ ಹಾಸಿಗೆ ನೀಡಲು ರೂ.5.500ರಿಂದ ರೂ.3,000 ವಿಧಿಸಲಾಗುತ್ತಿದೆ. 44 ಸೋಂಕಿತರೂ ಕೂಡ ಹೆಚ್ಚುವರಿ ಹಣ ನೀಡಿದ್ದಾರೆ. ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆಸ್ಪತ್ರೆಗಳಿಗೆ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ.  ಇದೀಗ ಕೆಲ ಆಸ್ಪತ್ರೆಗಳು ಸೋಂಕಿತರಿಗೆ ಹಣವನ್ನು ಪಾವತಿ ಮಾಡಲು ಒಪ್ಪಿಗೆ ನೀಡಿದೆ. ನಗರದ ನಾಲ್ಕು ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ ಎಂದು ಮಂಜುನಾಥ್ ಪ್ರಸಾದ್ ಅವರು ತಿಳಿಸಿದ್ದಾರೆ. 

ಈಗಾಗಲೇ ದಕ್ಷಿಣ ವಲಯದ 19 ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಶೇ.50ರಷ್ಟು ಹಾಸಿಗೆ ನೀಡಿದರೆ ಮಾತ್ರ ಆಸ್ಪತ್ರೆಗಳ ಮೇಲನ ಕ್ರಮ ಸಡಿಲಿಸುವ ಬಗ್ಗೆ ಪರಿಶೀಲಿಸುವುದಾಗಿ ಆಯುಕ್ತರು ತಿಳಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com